ಮುಂಬಯಿ: ಕನ್ನಡ ವೆಲ್ಫೇರ್ ಅಸೋಸಿಯೇಶನ್ ಘಾಟ್‌ಕೋಪರ್ ವತಿಯಿಂದ ಯಕ್ಷಗಾನ ತರಬೇತಿ ಶಿಬಿರವು ಜೂ. 30ರಂದು ಸಂಸ್ಥೆಯ ಸಭಾಗೃಹದಲ್ಲಿ ಚಾಲನೆಗೊಂಡಿತು.
ನಗರದಲ್ಲಿ ನಿರಂತರವಾಗಿ ಕನ್ನಡ ಸೇವಾ ಕೈಂಕರ್ಯವನ್ನು ಕಳೆದ ಐದು ದಶಕಗಳಿಂದ ಸಾರ್ಥಕವಾಗಿ ಮಾಡುತ್ತಾ ಕಳೆದ ನವೆಂಬರ್‌ನಲ್ಲಿ ವಿಜೃಂಭಣೆಯ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ತನ್ನ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ವೇಗವನ್ನು ನೀಡಿದ್ದು, ಪ್ರಸ್ತುತ ಪರಿಸದ ತುಳು-ಕನ್ನಡಿಗರ ಮಕ್ಕಳಿಗೆ ಯಕ್ಷಗಾನ ತರಬೇತಿಯನ್ನು ನೀಡಲು ಮುಂದಾಗಿದ್ದು ಹೆಮ್ಮೆಯ ವಿಷಯವಾಗಿದೆ.
ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಸಂಸ್ಥಾಪಕಾಧ್ಯಕ್ಷ, ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನೇತೃತ್ವದಲ್ಲಿ ಯಕ್ಷಗಾನ ತರಬೇತಿ ಕಾರ್ಯವು ಪ್ರಾರಂಭಗೊಂಡಿದ್ದು, ಇದೇ ಸಂದರ್ಭದಲ್ಲಿ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರನ್ನು ಸಂಸ್ಥೆಯ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ ಅವರು ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ ಎಲ್ಲೂರು, ಕೋಶಾಧಿಕಾರಿ ಹರೀಶ್ ಎಂ. ಶೆಟ್ಟಿ, ಜತೆ ಕಾರ್ಯದರ್ಶಿ ರಮಾನಂದ ಶೆಟ್ಟಿ, ಜತೆ ಕೋಶಾಧಿಕಾರಿ ಪೀಟರ್ ರೋಡ್ರಿಗಸ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ನಾರಾಯಣ ಶೆಟ್ಟಿ, ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ ನಂದಳಿಕೆ, ಹಿರಿಯಣ್ಣ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ತಿಮ್ಮ ದೇವಾಡಿಗ, ಮನೋಹರಶೆಟ್ಟಿ, ಮದ್ಯ ಶಂಕರ್ ಶೆಟ್ಟಿ, ಸುಜಾಲಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪರಿಸರದ ಸುಮಾರು 35ಕ್ಕೂ ಅಧಿಕ ವಿದ್ಯಾರ್ಥಿಗಳು ಯಕ್ಷಗಾನ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಬಿರವು ಪ್ರತೀ ರವಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ಸಭಾಗೃಹದಲ್ಲಿ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.