Advertisement

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

10:44 AM May 18, 2024 | Team Udayavani |

ಲಕ್ನೋ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದು ಆಕೆಯ ಶವದೊಂದಿಗೆ ಸೆಲ್ಫಿ ತೆಗೆದುಕೊಂಡು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ನಡೆದಿದೆ.

Advertisement

ಎಟಾಹ್ ಮೂಲದ ದಂಪತಿಗಳು ಗಾಜಿಯಾಬಾದ್‌ನಲ್ಲಿ ನೆಲೆಸಿದ್ದರು. ಪತಿ ಸ್ಥಳೀಯವಾಗಿ ಲೋನಿಯಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ನೋಯ್ಡಾದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಪತ್ನಿ ಕೆಲಸಕ್ಕೆ ಹೋಗುವ ವಿಚಾರದಲ್ಲಿ ಇಬ್ಬರ ನಡುವೆ ಹಲವು ಬಾರಿ ಜಗಳವಾಗುತ್ತಿತ್ತು.

ಪತ್ನಿಯನ್ನು ಸ್ಕಾರ್ಫ್‌ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಶವವನ್ನು ತನ್ನ ಮಡಿಲಲ್ಲಿಟ್ಟುಕೊಂಡು ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿದ್ದಾನೆ. ಆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

ವ್ಯಕ್ತಿಯ ಕಿರಿಯ ಸಹೋದರ ಅವನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾನೆ. ಆ ಬಳಿಕ ಸಹೋದರನ ಮನೆಗೆ ಬಂದಿದ್ದಾನೆ. ಹಾಸಿಗೆಯ ಮೇಲೆ ತನ್ನ ಅತ್ತಿಗೆಯ ಶವ, ಸಹೋದರ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿದ್ದಾನೆ.

ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಎರಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Advertisement

“ಪತಿ ಮೊದಲು ತನ್ನ ಹೆಂಡತಿಯನ್ನು ಸ್ಕಾರ್ಫ್‌ನಿಂದ ಉಸಿರುಗಟ್ಟಿಸಿ ನಂತರ ಅದೇ ಸ್ಕಾರ್ಫ್ ಬಳಸಿ ನೇಣು ಹಾಕಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೃತ ಪತ್ನಿಯೊಂದಿಗೆ ಸೆಲ್ಫಿ ತೆಗೆದು 5-6 ಮಂದಿ ಸಂಬಂಧಿಕರಿಗೆ ಕಳುಹಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ದೇಹತ್) ವಿವೇಕ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಬಾಗಿಲು ಒಳಗಿನಿಂದ ಲಾಕ್ ಆಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next