ಹೈದರಾಬಾದ್: ಭಾರೀ ಕುತೂಹಲ ಮೂಡಿಸಿರುವ ಹೈದರಾಬಾದ್ ನಗರ ಪಾಲಿಕೆ ಚುನಾವಣಾ ಫಲಿತಾಂಶದ ಮತಎಣಿಕೆ ಶುಕ್ರವಾರ(ಡಿಸೆಂಬರ್ 04, 2020) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಈವರೆಗಿನ ಲೆಕ್ಕಾಚಾರದ ಪ್ರಕಾರ ಭಾರತೀಯ ಜನತಾ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದೆ.
ಹೈದರಾಬಾದ್ ನಗರ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 73 ವಾರ್ಡ್ ಗಳಲ್ಲಿ, ಆಡಳಿತಾರೂಢ ಟಿಆರ್ ಎಸ್ 32 ಹಾಗೂ ಒವೈಸಿಯ ಎಐಎಂಐಎಂ 15 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.
2023ರಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಹೈದರಾಬಾದ್ ನಗರ ಪಾಲಿಕೆಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿತ್ತು. ಆ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಹೈಕಮಾಂಡ್ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಕಳುಹಿಸಿತ್ತು.
ಇದನ್ನೂ ಓದಿ:ಮಧ್ಯಪ್ರದೇಶ: ಸೈಕೋಪಾತ್ ಕಿಲ್ಲರ್ ಎನ್ ಕೌಂಟರ್ ಗೆ ಬಲಿ, ಐವರು ಪೊಲೀಸರಿಗೆ ಗಾಯ
ಈ ಚುನಾವಣೆಯಲ್ಲಿ 74 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಜಿಎಚ್ ಎಂಸಿ 150 ವಾರ್ಡ್ ಗಳನ್ನು ಹೊಂದಿದ್ದು, 1122 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ನಡೆಯಲಿದ್ದು, ಡಿಸೆಂಬರ್ 4ರಂದು ಮತ ಎಣಿಕೆ ನಡೆಯುತ್ತಿದ್ದು, ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಲಿದೆ.
2016ರ ಫೆಬ್ರುವರಿಯಲ್ಲಿ ನಡೆದ ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ ಎಸ್ 99 ಸ್ಥಾನ ಪಡೆದಿದ್ದು, ಅಸಾದುದ್ದೀನ್ ಒವೈಸಿಯ ಎಐಎಂಐಎಂ 44 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಬಿಜೆಪಿ 04 ಹಾಗೂ ಕಾಂಗ್ರೆಸ್ 02, ಟಿಡಿಪಿ ಒಂದು ಸ್ಥಾನದಲ್ಲಿ ಮಾತ್ರ ಜಯ ಸಾಧಿಸಿತ್ತು.