Advertisement
30 ವರ್ಷಗಳ ಹಿಂದೆ 1 ವಾರದ ಮಗು ತೀರಿ ಹೋಗಿತ್ತು. ನಾಮಕರಣವೂ ಆಗಿರ ಲಿಲ್ಲ. ಆ ವ್ಯಕ್ತಿಗೆ ಈಗ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿದೆ.
ಲಗ್ನ ನಿಗದಿ!
“ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ’ ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ ಬಾಯಾರು ಸಮೀಪದ ನಿವಾಸಿ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಮೊದಲ ಕರೆ ಅದಾಗಿತ್ತು. ಬಳಿಕ ಸರಿಹೊಂದುವ ಸುಮಾರು 30ಕ್ಕೂ ಅಧಿಕ ಸಂಬಂಧದವರು ಸಂಪರ್ಕಿಸಿದ್ದರು. ಪ್ರಶ್ನಾಚಿಂತನೆಯಲ್ಲಿ ಅವಲೋಕಿಸಿದಾಗ ಬಾಯಾರುವಿನ ವರ ಅಂತಿಮಗೊಳಿಸುವ ಬಗ್ಗೆ ಸಲಹೆ ಬಂದಿತ್ತು. ನಿಶ್ಚಿತಾರ್ಥ ಇದೆ!
ಜೀವಂತ ಇರುವಾಗ ಆಗದೇ ಇರುವ ಮದುವೆ ಕ್ರಮವನ್ನು ಜೀವಂತ ಇರುವ ಕುಟುಂಬ ವರ್ಗ ಸೇರಿ ಸಾಂಕೇತಿಕವಾಗಿ ನಡೆಸುತ್ತದೆ. ಮುಂದಿನ ರವಿವಾರ “ಪ್ರೇತ ವರ’ನ ಕಡೆಯವರು “ವಧು’ವಿನ ಮನೆಗೆ ಬರಲಿದ್ದಾರೆ. ಬಳಿಕ ನಾವು ಅವರ ಮನೆಗೆ ಹೋಗುತ್ತೇವೆ. ಬಳಿಕ ನಿಶ್ಚಿತಾರ್ಥ. ಆಟಿಯಲ್ಲಿ ಮದುವೆ ನಿಗದಿಯಾಗಿದೆ ಎನ್ನುತ್ತಾರೆ ಪುತ್ತೂರು ನಿವಾಸಿ.
Related Articles
ಜಾಹೀರಾತು ಬಂದ ಮೇಲೆ ಉದಯವಾಣಿಯಲ್ಲಿ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂತು. ತುಳುನಾಡಿನ ನಂಬಿಕೆಯ ಆಚರಣೆಗೆ ಎದುರಾಗಿದ್ದ ವಧು-ವರರ ಕೊರತೆ ಬಗ್ಗೆ ವಿವಿಧ ಸಮಾಜದ ಬಂಧುಗಳು ಪ್ರತಿಕ್ರಿಯಿಸಿದರು. ನಮ್ಮ ಮನೆಗೆ ಪ್ರೇತ ವರ ಬೇಕಾಗಿದ್ದ ಹಾಗೆಯೇ ನೂರಾರು ಮನೆಗೆ ವಧು-ವರ ಬೇಕಾಗಿದ್ದ ವಿಚಾರ ಆ ಸಂದರ್ಭ ಬೆಳಕಿಗೆ ಬಂತು. ಈ ಕುರಿತು ಜಾಗೃತಿಯೊಂದು ಮೂಡಿದಂತಾಗಿದೆ ಎನ್ನುತ್ತಾರೆ ಸಂಬಂಧಪಟ್ಟ ಮನೆಯವರು.
Advertisement