Advertisement

ಕಾಂಗ್ರೆಸ್ ಪಕ್ಷದ ಅವನತಿಗೆ ರಾಹುಲ್ ಗಾಂಧಿ ಕಾರಣ: ಸೋನಿಯಾಗೆ ಆಜಾದ್ 5 ಪುಟಗಳ ರಾಜೀನಾಮೆ ಪತ್ರ

02:51 PM Aug 26, 2022 | Team Udayavani |

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

Advertisement

ಕಾಂಗ್ರೆಸ್ ಪಕ್ಷದ ಅವನತಿಗೆ ರಾಹುಲ್ ಗಾಂಧಿಯೇ ಕಾರಣ: ಆಜಾದ್ ಕಿಡಿ

ಆಜಾದ್ ಅವರು ಸೋನಿಯಾ ಗಾಂಧಿಗೆ ಬರೆದಿರುವ 5 ಪುಟಗಳ ರಾಜೀನಾಮೆ ಪತ್ರದಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿದ್ದೀರಿ ಮತ್ತು ಅನನುಭವಿ ನಾಯಕನ ಕೈಗೆ ಕಾಂಗ್ರೆಸ್ ನಾಯಕತ್ವ ವಹಿಸಲು ಶ್ರಮಿಸುತ್ತಿರುವುದು ಪಕ್ಷವನ್ನು ಬಿಡಲು ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿ: ಲಾರಿಗೆ ಎರಡು ಬೈಕ್ ಗಳು ಢಿಕ್ಕಿಯಾಗಿ ಮೂವರು ಯುವಕರ ದುರ್ಮರಣ

ಜಮ್ಮು-ಕಾಶ್ಮೀರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಗುಲಾಂ ನಬಿ ಅವರನ್ನು ನೇಮಕ ಮಾಡಲಾಗಿತ್ತು. ಆಗಸ್ಟ್ 16ರಂದು ಆಜಾದ್ ಅವರು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಈ ಬೆಳವಣಿಗೆ ನಡೆದಿದೆ.

Advertisement

“ ಕಾಂಗ್ರೆಸ್ ಪಕ್ಷದ ಹೀನಾಯ ಸ್ಥಿತಿಗೆ ರಾಹುಲ್ ಗಾಂಧಿಯ ಅಪ್ರಬುದ್ಧತೆಯೇ ಕಾರಣ ಎಂದು ಕಿಡಿಕಾರಿರುವ ಆಜಾದ್, ಇದರ ಪರಿಣಾಮವಾಗಿ ಚುನಾವಣೆಗಳಲ್ಲಿ ಪಕ್ಷ ಕಳಪೆ ಸಾಧನೆ ಮಾಡುವಂತಾಗಿದೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯ ಬಾಲಿಶ ನಡವಳಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಲಿಷ್ಠವಾಗುತ್ತಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಪ್ರತಿಯನ್ನು ಹರಿದು ಹಾಕುವ ಮೂಲಕ ರಾಹುಲ್ ಗಾಂಧಿ ತಮ್ಮ ಅಪ್ರಬುದ್ಧತೆಯನ್ನು ಅನಾವರಣಗೊಳಿಸಿದ್ದರು, ಇದರ ಪರಿಣಾಮ 2014ರಲ್ಲಿ ಯುಪಿಎ ಸರ್ಕಾರದ ಸೋಲಿಗೆ ಗಣನೀಯ ಕೊಡುಗೆ ನೀಡಿದಂತಾಗಿತ್ತು ಎಂದು ಆಜಾದ್ ಪತ್ರದಲ್ಲಿ ವಾಗ್ದಾಳಿ ನಡೆಸಿದ್ದಾರೆ.

2014ರ ನಂತರ ನಡೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಹಾಗೂ 39 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗಣನೀಯ ರೀತಿಯಲ್ಲಿ ಪರಾಜಯಗೊಂಡಿದೆ. ಇದೀಗ ದೇಶದಲ್ಲಿ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ ಎಂದು ಆಜಾದ್ ತೀಕ್ಷ್ಣವಾಗಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದ ನಂತರ ನೀವೇ ಮತ್ತೆ ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದೀರಿ. ರಾಹುಲ್ ಅಧ್ಯಕ್ಷರಾಗಿದ್ದ ವೇಳೆ ಕಾಂಗ್ರೆಸ್ ಪಕ್ಷದ ಎಲ್ಲಾ ವ್ಯವಸ್ಥೆಯನ್ನು ನಾಶ ಮಾಡಿದ್ದರು ಎಂದು ಆಜಾದ್ ಕಿಡಿಕಾರಿದ್ದಾರೆ. ಇಂದಿಗೂ ರಿಮೋಟ್ ಕಂಟ್ರೋಲ್ ಮಾದರಿಯಲ್ಲಿ ಆಡಳಿತ ನಡೆಸುತ್ತಿದ್ದೀರಿ ಎಂದು ದೂರಿದ್ದಾರೆ.

“ನಿಮಗೆ ಮಗನ ಮೇಲಿನ ಮಮಕಾರದಿಂದಾಗಿ ಶತಮಾನಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಅವನತಿಗೆ ತಳ್ಳುತ್ತಿದ್ದೀರಿ. ದೇಶದಲ್ಲಿ ಭಾರತ್ ಜೋಡೊ ಯಾತ್ರಾ ಆರಂಭಿಸುವ ಮುನ್ನ ಕಾಂಗ್ರೆಸ್ ಜೋಡೋ ಯಾತ್ರಾದ ಬಗ್ಗೆ ಗಮನಹರಿಸುವುದು ಒಳ್ಳೆಯದು ಎಂದು ಆಜಾದ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next