Advertisement

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆಲವೇ ಗಂಟೆಗಳಲ್ಲಿ ಸ್ಥಾನ ತೊರೆದ ಗುಲಾಂ ನಬಿ ಆಜಾದ್

08:13 AM Aug 17, 2022 | Team Udayavani |

ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿ ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪ್ರಚಾರ ಸಮಿತಿಯ ಮುಖ್ಯಸ್ಥರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಆರೋಗ್ಯದ ಕಾರಣವನ್ನು ಉಲ್ಲೇಖಿಸಿದ ಅವರು ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಎಲ್ಲ ಬೆಳವಣಿಗೆ ನಡುವೆಯೇ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಮಂಗಳವಾರ ವಿಕರ್ ರಸೂಲ್ ವಾನಿ ಅವರನ್ನು ಜಮ್ಮು ಮತ್ತು ಕಾಶ್ಮೀರದ ಅಧ್ಯಕ್ಷರಾಗಿ ಮತ್ತು ರೇಮನ್‌ ಭಲ್ಲಾ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಇದನ್ನೂ ಓದಿ : ಮಂಗಳೂರು : ಕೊಟ್ಟಿಗೆಯಿಂದ ದನ ಕಳವು : ಐವರು ಆರೋಪಿಗಳ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next