Advertisement
ಉಪಚುನಾವಣೆ ವೇಳೆ ಯಾಸಿರ್ ಖಾನ್ ಪಠಾಣ್ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದ್ದರಿಂದ ಅಸಮಾಧಾನಗೊಂಡಿದ್ದ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅಷ್ಟೇ ಅಲ್ಲದೆ, ಪಠಾಣ್ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದರು. ಯಾರೇ ಮನವೊಲಿಸಿದರೂ ಉಮೇದುವಾರಿಕೆ ಹಿಂಪಡೆಯಲು ಒಪ್ಪದಿದ್ದ ಖಾದ್ರಿ, ವಸತಿ ಸಚಿವ ಜಮೀರ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಹಲವು ನಾಯಕರು ಸಿಎಂ ಸಿದ್ದರಾಮಯ್ಯ ಎದುರು ಕೂರಿಸಿದಾಗಲೂ ನಾಮಪತ್ರ ಹಿಂಪಡೆಯುವುದಿಲ್ಲ. ಪಠಾಣ್ಗೆ ಹಿಂದೆ ಸರಿಯಲು ಹೇಳಿ ಎಂದಿದ್ದರು.
Related Articles
Advertisement
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿಯವರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಗ್ಗಾವಿ ಉಪಚುನಾವಣೆ ವೇಳೆ ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ, ಎರಡೇ ದಿನದಲ್ಲಿ ಖಾದ್ರಿಗೆ ಈ ಗಿಫ್ಟ್ ನೀಡಿದ್ದಾರೆ.
ಇನ್ನು ಯಾಸೀರ್ ಖಾನ್ ಪಠಾಣ್ ಗೆಲ್ಲುತ್ತಿದ್ದಂತೆಯೇ ಖಾದ್ರಿ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಫಲಿತಾಂಶದ ವಿವರ ನೀಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಖಾದ್ರಿಗೆ ಅಭಿನಂದನೆ ತಿಳಿಸಿದ್ದರು. ಇದೀಗ ಖಾದ್ರಿಗೆ ಸಿದ್ದರಾಮಯ್ಯ ಕೊಟ್ಟ ಭರವಸೆಯನ್ನು ಫಲಿತಾಂಶ ಪ್ರಕಟವಾದ ಎರಡನೇ ದಿನದಲ್ಲಿ ಈಡೇರಿಸಿದ್ದಾರೆ.
ಗೌರವ್ ಗುಪ್ತರಿಗೆ ಕೊಕ್:ಇದೀಗ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಅಧ್ಯಕ್ಷರಾಗಿದ್ದ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತರಿಗೆ ಕೊಕ್ ನೀಡಿರುವ ಸರ್ಕಾರ, ಶಿಗ್ಗಾವಿಯ ಸೈಯದ್ ಖಾದ್ರಿ ಅವರನ್ನು ಹೆಸ್ಕಾಂ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದೆ. ಉಪ ಚುನಾವಣೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರ್ ಪಠಾಣ್ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಸಚಿವ ಜಮೀರ್ ಅಹಮದ್ ಖಾನ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ನಸೀರ್ ಅಹಮದ್, ಸಲೀಂ ಅಹಮದ್, ಶ್ರೀನಿವಾಸ್ ಮಾನೆ, ಅನ್ವರ್ ಬಾಷಾ, ಸಿರಾಜ್ ಶೇಕ್ ಉಪಸ್ಥಿತರಿದ್ದರು.