Advertisement

ಶುಂಠಿ ಬೆಳೆಗೂ ಕಳ್ಳರ ಕಾಟ… ಹೊಲದಲ್ಲಿ ಬೆಳೆದಿದ್ದ ಶುಂಠಿ ಕಳ್ಳತನ… ಕಂಗಾಲಾದ ರೈತ

09:28 AM Jul 19, 2023 | Team Udayavani |

ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.

Advertisement

ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇಗೌಡರ ಜಮೀನಿನಲ್ಲಿ ಈ ಘಟನೆ ನಡೆದಿದೆ.

ತಾಲೂಕಿನ ಚೆನ್ನಸೋಗೆಯ ಪ್ರಸನ್ನಕುಮಾರ್ ಹೊಸಕೋಟೆಯ ಶ್ರೀನಿವಾಸ್, ದೇವೇಂದ್ರ ಸೇರಿದಂತೆ ಮೂವರು ಸಣ್ಣೆನಹಳ್ಳಿಯ ಚಂದ್ರೇಗೌಡ ಮತ್ತಿತರ ರೈತರಿಂದ ಒಟ್ಟು 15 ಎಕರೆ ಜಮೀನನ್ನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಶುಂಠಿ ಬೆಳೆಯೂ ಉತ್ತಮವಾಗಿ ಬಂದಿದ್ದು, ಶನಿವಾರ ರಾತ್ರಿ ಯಾರೋ ಕಳ್ಳರು ಸುಮಾರು ಅರ್ಧ ಎಕರೆಯಷ್ಟು 5 ಲಕ್ಷ ರೂ. ಬೆಲೆಬಾಳುವ ಶುಂಠಿ ಬೆಳೆಯನ್ನು ಕಳುವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮನೆ-ಅಂಗಡಿಗಳಲ್ಲಿ ಕಳ್ಳತನ ಮಾಡುವುದು, ಪಂಪ್ ಸೆಟ್, ಸ್ಲಿಂಕ್ಲರ್ ಸೆಟ್‌ಗಳನ್ನು ಕಳ್ಳರು ಹೊತ್ತೊಯ್ಯುತ್ತಿದ್ದರು. ಇದೀಗ ಶುಂಠಿ ಬೆಲೆ ಗಗನಕ್ಕೇರಿರುವುದರಿಂದ ಶುಂಠಿಬೆಳೆ ಮೇಲೂ ಕಳ್ಳರು ಕಣ್ಣು ಹಾಯಿಸಿದ್ದು, ರೈತರು ಕಷ್ಟಪಟ್ಟು ಸಾಲಸೋಲಮಾಡಿ ಬೆಳೆದ ಬೆಳೆಯೂ ದಕ್ಕದಂತಾಗಿದೆ.

ಇದನ್ನೂ ಓದಿ: ನಿರ್ಭಯಾ ಅಪರಾಧಿಗಳಿಗೆ ಮರಣದಂಡನೆ ವಿಧಿಸುವಂತೆ ಕೋರಿದ ವಕೀಲರಿಂದ ಬ್ರಿಜ್ ಭೂಷಣ್ ಪರ ವಾದ

Advertisement
Advertisement

Udayavani is now on Telegram. Click here to join our channel and stay updated with the latest news.

Next