Advertisement

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಶುಂಠಿ ಬೆಳೆ: ಲಕ್ಷಾಂತರ ರೂ ನಷ್ಟ

02:50 PM Aug 07, 2020 | keerthan |

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಅಪಾರ ನಷ್ಟಕ್ಕೆ ಕಾರಣವಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ಪ್ರವಾಹದ ಕಾರಣದಿಂದ ಶುಂಠಿ ಬೆಳೆಗೆ ಹಾನಿಯಾಗಿದೆ.

Advertisement

ಕಿರಗುಂದ ಗ್ರಾಮದ ಶುಂಠಿ ಗದ್ದೆಗೆ ನೆರೆ ನೀರು ನುಗ್ಗಿದ್ದು, ಅಪಾರ ನಷ್ಟ ಉಂಟಾಗಿದೆ. ರೈತರು ಮಿಕ್ಕ ಶುಂಠಿ ಗಿಡಗಳನ್ನು ಆರಿಸಿಕೊಂಡು ಸುರಕ್ಷಿತ ಜಾಗಕ್ಕೆ ಕೊಂಡೊಯ್ಯುತ್ತಿದ್ದಾರೆ.

ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ತುಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಶೃಂಗೇರಿ ನದಿ ತಟದ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿ ನದಿ ಪ್ರವಾಹಕ್ಕೆ ಕಾರೊಂದು ಮುಳುಗಡೆಯಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ತುಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ಶೃಂಗೇರಿ ಪಟ್ಟಣದ ಹಲವು ಮನೆಗಳು ಜಲಾವೃತವಾಗಿದೆ. ಇಲ್ಲಿನ ಗಾಂಧಿ ಮೈದಾನ ಜಲಾವೃತವಾಗಿದ್ದು, ಕಪ್ಪೆ ಶಂಕರ ದೇವಾಲಯ ಕೂಡ ಮುಳುಗಡೆಯಾಗಿದೆ.

ಇದನ್ನೂ ಓದಿ: ಮಲೆನಾಡಿನಲ್ಲಿ ಮಳೆಯ ಆರ್ಭಟ: ಪ್ರವಾಹಕ್ಕೆ ಮುಳುಗಿದ ಕಾರು, ಮಂಗಳೂರು ಶೃಂಗೇರಿ ಹೆದ್ದಾರಿ ಬಂದ್

ಮಂಗಳೂರು ಶೃಂಗೇರಿ ಹೆದ್ದಾರಿ ಬಂದ್: ತುಂಗಾ ನದಿ ಪ್ರವಾಹದ ಕಾರಣದಿಂದ ಮಂಗಳೂರು ಶೃಂಗೇರಿ ಹೆದ್ದಾರಿ ಬಂದ್ ಆಗಿದೆ. ರಸ್ತೆಯ ಮೇಲೆ ನೀರು ಉಕ್ಕಿ ಹರಿಯುತ್ತಿರುವ ಕಾರಣ ಸಂಚಾರ ಸ್ಥಗಿತವಾಗಿದೆ. ರಾತ್ರಿಯಿಂದಲೇ ಪ್ರಯಾಣಿಕರು ಪರದಾಟ ಪಡುವಂತಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next