Advertisement

ಇಬ್ಬನಿ ತಬ್ಬಿದ ಇಳೆಯಲಿ ಚಿತ್ರದಲ್ಲಿ ಗಿರಿಜಾ ಶೆಟ್ಟರ್

03:15 PM Aug 14, 2023 | Team Udayavani |

“ಪರಂವಃ ಸ್ಟುಡಿಯೋಸ್‌’ ಲಾಂಛನದಲ್ಲಿ ಜಿ. ಎಸ್‌ ಗುಪ್ತ ಹಾಗೂ ರಕ್ಷಿತ್‌ ಶೆಟ್ಟಿ ನಿರ್ಮಿಸುತ್ತಿರುವ, “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಈಗ ಮತ್ತೂಬ್ಬ ಖ್ಯಾತ ನಟಿಯ ಆಗಮನವಾಗಿದೆ. ಅವರೇ ಗಿರಿಜಾ ಶೆಟ್ಟರ್‌. ತೆಲುಗಿನ “ಗೀತಾಂಜಲಿ’ ಸೇರಿದಂತೆ ಅನೇಕ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿರುವ ಗಿರಿಜಾ ಶೆಟ್ಟರ್‌, ಈಗ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Advertisement

ಇನ್ನು ಔಟ್‌ ಆ್ಯಂಡ್‌ ಔಟ್‌ ಪ್ರೇಮಕಥಾಹಂದರ ಹೊಂದಿರುವ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದಲ್ಲಿ ವಿಹಾನ್‌ ನಾಯಕನಾಗಿ ಮತ್ತು ಅಂಕಿತಾ ಅಮರ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಚಂದ್ರಶೇಖರ್‌ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಹಾಡುಗಳಿಗೆ ಗಗನ್‌ ಬಡೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ.

ಸಿನಿಮಾಕ್ಕೆ ಶ್ರೀವತ್ಸನ್‌ ಸೆಲ್ವರಾಜನ್‌ ಛಾಯಾಗ್ರಹಣ, ರಕ್ಷಿತ್‌ ಕಾಪ್‌ ಸಂಕಲನವಿದೆ. ಸದ್ಯ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದಲ್ಲಿ ಗಿರಿಜಾ ಶೆಟ್ಟರ್‌ ಅವರ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅವರಿಗೆ ಸ್ವಾಗತ ಕೋರಿದ್ದು, ಸಿನಿಮಾದಲ್ಲಿ ಅವರ ಪಾತ್ರದ ಬಗ್ಗೆ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next