Advertisement

ಗೋವಾ : ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ : ಗಿರೀಶ್ ಚೋಡಣಕರ್

08:09 PM May 27, 2021 | Team Udayavani |

ಪಣಜಿ : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಡಳಿತ ಸರ್ಕಾರ ವಿಫಲವಾದ ಕಾರಣ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಗೋವಾ ರಾಜ್ಯ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ರಾಜ್ಯಪಾಲ ಭಗತ್‍ಸಿಂ ಗ್ ಕೋಶ್ಯಾರಿ ರವರಿಗೆ ಪತ್ರ ಬರೆದಿದ್ದಾರೆ.

Advertisement

ಇದನ್ನೂ ಓದಿ : ಕೋವಿಡ್ : ರಾಜ್ಯದಲ್ಲಿಂದು 31459 ಜನರು ಗುಣಮುಖ; 24214 ಹೊಸ ಪ್ರಕರಣ ಪತ್ತೆ

ರಾಜ್ಯದಲ್ಲಿ ವೆಂಟಿಲೇಟರ್ ಬೆಡ್, ಆಮ್ಲಜನಕ ಲಭ್ಯತೆಯಿಲ್ಲದೆಯೇ ಮತ್ತು ಅಗತ್ಯ ಔಷಧಿ, ಆಸ್ಪತ್ರೆ ಕೊರತೆಯಿಂದಾಗಿ  2000 ಕ್ಕೂ ಹೆಚ್ಚು ಜನರು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ, ಇನ್ನೂ ಬಲಿಯಾಗುತ್ತಿದ್ದಾರೆ. ಮುಖ್ಯಮಂತ್ರಿ ಪ್ರಮೋದ ಸಾವಂತ್ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ “ಭಿವಪಾಚಿ ಗರಜ್ ನಾ” (ಹೆದರುವ ಅಗತ್ಯವಿಲ್ಲ) ಎಂದು ಹೇಳುವ ಮೂಲಕ ಜನರಲ್ಲಿ ತಪ್ಪು ನಂಬಿಕೆಯನ್ನು ಸೃಷ್ಠಿಸುತ್ತಿದ್ದಾರೆ. ಇದರಿಂದಾಗಿ ದೇಶದ ಇತರ ರಾಜ್ಯಗಳಿಂದ ಪ್ರವಾಸಿಗರನ್ನು ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಹ್ವಾನಿಸಿದರು ಎಂದು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಚೋಡಣಕರ್ ಉಲ್ಲೇಖಿಸಿದ್ದಾರೆ.

ಅಸಮರ್ಥ ಮುಖ್ಯಮಂತ್ರಿ ನೇತೃತ್ವದ ಪ್ರಸ್ತುತ  ರಾಜ್ಯ ಸರ್ಕಾರವು ಭಾರತ ಸಂವಿಧಾನದ 21 ನೇಯ ಪರಿಚ್ಛೇದದ ಅಡಿಯಲ್ಲಿ ಪ್ರತಿಪಾದಿಸಿರುವ ಜನರ ಮೂಲಭೂತ ಹಕ್ಕನ್ನು ರಕ್ಷಿಸಲು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಪತ್ರದ ಮೂಲಕ ಆಕ್ರೊಶ ಹೊರ ಹಾಕಿದ್ದು,  ಮುಖ್ಯಮಂತ್ರಿ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಲ್ಲಿ ಪತ್ರದ ಮೂಲಕ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ : ಜಿಲ್ಲಾಧಿಕಾರಿ ಮುಗಿಲನ್

Advertisement
Advertisement

Udayavani is now on Telegram. Click here to join our channel and stay updated with the latest news.

Next