Advertisement

ಉತ್ತರಪ್ರದೇಶ: 10 ವರ್ಷದ ಬಾಲಕಿಯ ಮೇಲೆ ಮೂವರಿಂದ ಗ್ಯಾಂಗ್ ರೇಪ್

10:02 PM Jun 19, 2022 | Team Udayavani |

ಪಿಲಿಭಿತ್ : ಉತ್ತರಪ್ರದೇಶದ ಬಿಸಲ್‌ಪುರ ನ ಹಳ್ಳಿಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

Advertisement

ಮೇ 15 ರಂದು ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಘಟನೆ ನಡೆದಿದ್ದು, ಖುರ್ಜಾಲ್, ಜಿತೇಂದ್ರ ಮತ್ತು ವೀರೇಂದ್ರ ಎಂಬ ಮೂವರು ಆಕೆಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಭಾನುವಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅತ್ಯಾಚಾರದ ನಂತರ ಆರೋಪಿಗಳು ಬಾಲಕಿಯನ್ನು ಹೊಲದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಬದುಕುಳಿದ ಬಾಲಕಿಯ ತಾಯಿ ಆರೋಪಿಸಿದ್ದಾರೆ ಎಂದು ಸರ್ಕಲ್ ಅಧಿಕಾರಿ ಪ್ರಶಾಂತ್ ಸಿಂಗ್ ಹೇಳಿದ್ದಾರೆ.

ನಂತರ ಗ್ರಾಮಸ್ಥರು ಆಕೆಯನ್ನು ಕಂಡು ಮನೆಯವರಿಗೆ ವಿಷಯ ತಿಳಿಸಿದ್ದು, ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರಂಭದಲ್ಲಿ ದೂರು ನೀಡಲು ಮುಂದಾದಾಗ ಪೊಲೀಸರು ಗಮನ ಹರಿಸಲಿಲ್ಲ ಎಂದು ಬಾಲಕಿಯ ತಾಯಿ ದೂರಿದ್ದಾರೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next