ದೆಹಲಿ: ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸಮರ್ಕ್ ಮಲಿಕ್ (20) ಬಂಧಿತ ಚಾಲಕ. ಈತ ಭಾರತೀಯ ವಾಯುಪಡೆಯ ಅಧಿಕಾರಿಯ ಮಗನೆಂದು ತಿಳಿದು ಬಂದಿದೆ.
ಭಾನುವಾರ ( ಫೆ.26 ರಂದು) ನೈಋತ್ಯ ದೆಹಲಿಯ ಕಂಟೋನ್ಮೆಂಟ್ ಪ್ರದೇಶದ ರಸ್ತೆಯಲ್ಲಿ ವೇಗವಾಗಿ ಚಲಾಯಿಸಿದ ಪರಿಣಾಮ ಕಾರು ಬಾಲಕಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬಾಲಕಿಯನ್ನು ಚಾಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಆದರೆ ಆದಾಗಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.
ಈ ಸಂಬಂಧ ಬಾಲಕಿಯ ತಾಯಿ ಪ್ರಕರಣ ದಾಖಲಿಸಿದ್ದು,ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯ ತಾಯಿ ಮನೆ ಕೆಲಸ ಮಾಡಿಕೊಂಡಿದ್ದಾರೆ. ತಂದೆ ಖಾಸಗಿ ಕಂಪೆನಿಯಲ್ಲಿದ್ದಾರೆ.ಅರ್ಜುನ್ ವಿಹಾರ್ ದಲ್ಲಿ ಬಾಲಕಿಯ ಕುಟುಂಬ ವಾಸಿಸುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.