Advertisement

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ದೂರು ದಾಖಲು

01:15 AM Apr 02, 2024 | Team Udayavani |

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ವಿಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ಪರಾರಿಯಾಗಿದ್ದಾನೆ.

Advertisement

ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದ ಸಂದರ್ಭ ಆರೋಪಿ ಯುವಕ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್‌ ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next