Advertisement

ಗೊಂಡಾ: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 13 ವರ್ಷದ ಬಾಲಕ

04:03 PM Jul 24, 2022 | Team Udayavani |

ಗೊಂಡಾ : ಇಲ್ಲಿನ ವಜೀರ್‌ಗಂಜ್ ಪ್ರದೇಶದ ಹಳ್ಳಿಯೊಂದರಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಹದಿಹರೆಯದ ಹುಡುಗನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಉತ್ತರಪ್ರದೇಶ ಪೊಲೀಸರು ಭಾನುವಾರ ತಿಳಿಸಿದ್ದಾರೆ.

Advertisement

13 ವರ್ಷದ ಬಾಲಕ ಶನಿವಾರ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಬಾಲಾಪರಾಧಿಗಳ ಗೃಹಕ್ಕೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವರಾಜ್ ತಿಳಿಸಿದ್ದಾರೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next