ಪುಣೆ: ಅಪ್ರಾಪ್ತ ಬಾಲಕಿಯ ಮೇಲೆ ತಂದೆ, ಹದಿಹರೆಯದ ಸಹೋದರ, ಚಿಕ್ಕಪ್ಪ ಅತ್ಯಾಚಾರ ಎಸಗಿರುವ ಘಟನೆ ಪುಣೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಕಳೆದ ಐದು ವರ್ಷಗಳಿಂದ ಎಸಗಲಾಗಿದೆ ಎಂದು ವರದಿ ತಿಳಿಸಿದೆ.
ತಂದೆ ಮತ್ತು ಸಹೋದರ, ಆಕೆಯ ಅಜ್ಜ ಮತ್ತು ಚಿಕ್ಕಪ್ಪ ಕೂಡಾ ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ ಕಲಂ ಪ್ರಕಾರ ಅತ್ಯಾಚಾರ ಮತ್ತು ಕಿರುಕುಳ ಪ್ರಕರಣ ದಾಖಲಿಸಲಾಗಿದ್ದು, ಇನ್ನಷ್ಟೇ ಅರೋಪಿಗಳನ್ನು ಬಂಧಿಸಬೇಕಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.
ಪುಣೆಯ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಸಹೋದರ ಹಾಗೂ 45 ವರ್ಷ ಪ್ರಾಯದ ತಂದೆ ಮೇಲೆ ಐಪಿಸಿ ಸೆಕ್ಷನ್ 376ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಆಕೆಯ ಅಜ್ಜ (60ವರ್ಷ0 ಮತ್ತು ಚಿಕ್ಕಪ್ಪ(25ವರ್ಷ)ನ ವಿರುದ್ಧ ಸೆಕ್ಷನ್ 354ರ ಪ್ರಕಾರ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿ ಮತ್ತು ಕುಟುಂಬ ಸದಸ್ಯರು ಬಿಹಾರ ಮೂಲದವರಾಗಿದ್ದು, ಪುಣೆಯಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಶಾಲೆಯಲ್ಲಿ ಬಾಲಕಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ತಿಳಿಸಿದ ಸಂದರ್ಭದಲ್ಲಿ ಬಾಲಕಿ ಈ ವಿಷಯವನ್ನು ಬಹಿರಂಗಗೊಳಿಸಿರುವುದಾಗಿ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಿನಿ ಸತ್ಪುಟೆ ಮಾಹಿತಿ ನೀಡಿದ್ದಾರೆ.
2017ರಲ್ಲಿ ಬಿಹಾರದಲ್ಲಿದ್ದಾಗಲೇ ತಂದೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಆರಂಭಿಸಿದ್ದ ಎಂದು ದೂರಿನಲ್ಲಿ ತಿಳಿಸಿರುವುದಾಗಿ ಸತ್ಪುಟೆ ವಿವರ ನೀಡಿದ್ದು, ಸಹೋದರ 2020ರಲ್ಲಿ ಲೈಂಗಿಕ ದೌರ್ಜನ್ಯ ಎಸಗಲು ಆರಂಭಿಸಿರುವುದಾಗಿ ತಿಳಿಸಿದ್ದಾರೆ.