Advertisement

Missing case: ಮೂಡುಬೆಳ್ಳೆ: ಯುವತಿ ನಾಪತ್ತೆ

11:24 AM Oct 12, 2023 | Team Udayavani |

ಶಿರ್ವ: ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

Advertisement

ಬಿ.ಕಾಂ. ಪದವೀಧರೆಯಾಗಿದ್ದ ಈಕೆ ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು.

ಆಕೆ ಉಪಯೋಗಿಸುತ್ತಿದ್ದ ಮೊಬೈಲ್‌ ಕರೆ ಮಾಡಿದಾಗ ಸ್ವಿಚ್‌ ಆಫ್‌ ಆಗಿದ್ದು,ಆಕೆಯ ಸ್ನೇಹಿತರಲ್ಲಿ,ಸಂಬಂಧಿಕರ ಮನೆಯಲ್ಲಿ, ಆಸುಪಾಸಿನಲ್ಲಿ ಹುಡುಕಾಡಿದ್ದು, ಈ ತನಕ ಪತ್ತೆಯಾಗಿರುವುದಿಲ್ಲ ಎಂದು  ಎಂದು ಸಹೋದರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next