ಬೆಂಗಳೂರು: ಅಪರಾಧ ವಿಭಾಗದ ಪೊಲೀಸ್ ಸಿಬ್ಬಂದಿ ಸೋಗಿನಲ್ಲಿ ಪಿಸ್ತೂಲ್ ಮಾದರಿಯ ಲೈಟರ್ ತೋರಿಸಿ ಹೆದರಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಮಾರುತಿನಗರದ ಶ್ರೀನಾಥ್ (32) ಎಂಬವನನ್ನು ಪೋಕೊÕà ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಬೈಲ್ ಅಂಗಡಿ ನಡೆಸುತ್ತಿರುವ ಆರೋಪಿ ತನ್ನ ಸ್ನೇಹಿತನ ಮೂಲಕ ಸಂತ್ರಸ್ತೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ.
ಜು.23ರಂದು ಆಕೆ ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿದ ಆರೋಪಿ ನಿರ್ಜನ ಪ್ರದೇಶದ ಬಳಿ ಅಡ್ಡ ಹಾಕಿದ್ದಾನೆ. ತಾನು ಅಪರಾಧ ವಿಭಾಗದ ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡ ಆತ, ತಾನು ಆಕೆ ಜತೆ ಮಾತನಾಡಬೇಕೆಂದು ಕಾರಿನಲ್ಲಿ ಕೂರಿಸಿಕೊಂಡು ಮಾರುತಿನಗರದ ಮನೆಗೆ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಗೆ ಪಿಸ್ತೂಲ್ ಮಾದರಿಯ ಲೈಟರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಪ್ರಾಣ ಬೆದರಿಕೆ ಹಾಕಿ ಕಳುಹಿಸಿದ್ದಾನೆ ಎಂದು ಹೇಳಲಾಗಿದೆ.
ಮನೆಗೆ ಬಂದ ವಿದ್ಯಾರ್ಥಿನಿ ಗಾಬರಿಯಿಂದ ಇರುವುದನ್ನು ಗಮನಿಸಿದ ಪೋಷಕರು ಆಕೆಯನ್ನು ಪ್ರಶ್ನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಶ್ರೀನಾಥ್ಗೆ ಈಗಾಗಲೇ ವಿವಾಹವಾಗಿದ್ದು, ಪತ್ನಿಯಿಂದ ದೂರವಾಗಿದ್ದಾನೆ. ಘಟನೆಗೂ ಕೆಲ ದಿನಗಳ ಹಿಂದೆ ಸಂತ್ರಸ್ತೆ ತನ್ನ ಸ್ನೇಹಿತನ ಜತೆ ಉದ್ಯಾನವನದಲ್ಲಿ ಮಾತನಾಡುತ್ತಿರುವ ದೃಶ್ಯವನ್ನು ಆರೋಪಿ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದ. ಇದನ್ನು ತೋರಿಸಿಯೇ ಬ್ಲಾಕ್ವೆುàಲ್ ಮೂಲಕ ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.