Advertisement

ಲಿಂಗಾಯತರಿಗೆ ನಿಗಮ ಬೇಡ, ಶೇ.16 ಮೀಸಲು ಕೊಡಿ: ಸಿಎಂಗೆ ಎಂ.ಬಿ.ಪಾಟೀಲ್ ಪತ್ರ

04:03 PM Nov 16, 2020 | keerthan |

ವಿಜಯಪುರ: ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡುವಂತೆ ಮಾಜಿ ಸಚಿವ ಹಾಗೂ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ ಹೋರಾಟಗಾರ ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

Advertisement

ಕರ್ನಾಟಕ ರಾಜ್ಯದಯ ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಇವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿದೆ.

ರಾಜ್ಯದ 6.5 ಕೋಟಿ ಜನಸಂಖ್ಯೆಯಲ್ಲಿ ಲಿಂಗಾಯತರ ಜನಸಂಖ್ಯೆ 1 ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ನೆರೆಯ ಮಹಾರಾಷ್ಟ್ರ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲೂ ಕೂಡ ಲಿಂಗಾಯತರಿಗೆ ಶೇ.16-18 ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200 ಕೋಟಿ ಅನುದಾನ ಒದಗಿಸಿದರೆ, ಹೆಚ್ಚಿನ ಪ್ರಯೋಜನವಾಗುವದಿಲ್ಲ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18ರಷ್ಟು ಮೀಸಲಾತಿ ಕಲ್ಪಿಸುವಂತೆ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next