ಚಿಕ್ಕಬಳ್ಳಾಪುರ: ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಜೀವನೋಪಾಯಕ್ಕೆ ಮುಂದಿನ ಮೂರು ತಿಂಗಳು ಕನಿಷ್ಠ 3000 ಸಾವಿರ ರೂ. ಹಣವನ್ನು ನೀಡಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳ ಬೇಕೆಂದು ಚಿಕ್ಕಬಳ್ಳಾಪುರ ಸಂಸದ ಬಿ.ಎನ್. ಬಚ್ಚೇಗೌಡ ಮನವಿ ಮಾಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಕೊರೊನಾ ಸೋಂಕು ನಿಯಂತ್ರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ 3ನೇ ಅಲೆ ಬಂದೇ ಬರುತ್ತೆ ಎಂದು ಈಗಾ ಗಲೇ ತಜ್ಞರು ಹೇಳಿದ್ದಾರೆ. ಅದನ್ನು ಸಮರ್ಪಕವಾಗಿ ಎದುರಿಸಲು ಸರ್ಕಾರ ಈಗಿ ನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಕೊರೊನಾ ತೊಲಗಿಸಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದ ಪ್ರತಿ ಯೊಬ್ಬ ಮಂತ್ರಿ ಸಮನ್ವಯತೆಯಿಂದ ಕೆಲಸ ಮಾಡಬೇಕು, ಕೊರೊನಾ ನಿಯಂತ್ರಣ ಸಂಬಂಧ ರಚಿಸಿರುವ ರಾಜ್ಯಮಟ್ಟದ ಟಾಸ್ಕ್ ಪೊರ್ಸ್ ಸಮಿತಿಯಲ್ಲಿರುವ ಎಲ್ಲರೂ ಪರಿ ಣಾಮ ಕಾರಿಯಾಗಿ ಕಾರ್ಯನಿರ್ವಹಿಸಿ ಕೊರೊ ನಾ ತೊಲಗಿಸಬೇಕು ಎಂದು ಮನವಿ ಮಾಡಿದರು.
ಲಸಿಕೆ ಸವಾಲಾಗಿ ಸ್ವೀಕರಿಸಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹಾಗಾ ಗಿ, ಮುಂದಿನ ದಿನಗಳಲ್ಲಿ 3ನೇ ಅಲೆ ಹರಡುವ ಅಪಾಯ ಇರುವ ಕಾರಣ, ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಲು ಆಸಕ್ತಿ ವಹಿಸಿದ್ದಾರೆ. ಇದರಿಂದ ಸದ್ಯದ ಪರಿಸ್ಥಿತಿಯಲ್ಲಿ ದಾಸ್ತಾನು ಇರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ನೀಡಿ, ಬಳಿಕ 18 ವರ್ಷ ನಂತರದವರಿಗೆ ನೀಡಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಸೋಂಕು ಸವಾಲಾಗಿ ಸ್ವೀಕರಿಸಿ: ರಾಜ್ಯ ಸರ್ಕಾರ ಕೋವಿಡ್ ಲಸಿಕೆಯನ್ನು ಪೂರೈಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅದು ಬಂದ ತಕ್ಷಣ ಪೂರೈಕೆ ಮಾಡುವ ಕೆಲಸವನ್ನು ಮಾಡುತ್ತಾರೆ. ಈ ನಿಟ್ಟಿ ನಲ್ಲಿ ಸರ್ಕಾರವೂ ನಾಗರಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಅಧಿಕಾರಿಗಳು, ಜನಪ್ರತಿನಿಧಿ ಗಳು ಕೊರೊನಾ ಸೋಂಕನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ: ಕೊರೊನಾ ಸೋಂಕಿನ ಪ್ರಭಾವದಿಂದ ದೇಶದ ಆರ್ಥಿಕ ಪರಿಸ್ಥಿತಿ ಸಹ ಉತ್ತಮವಾಗಿಲ್ಲ, ಬಡವರ ಜೀವನ ಕಷ್ಟವಿದೆ. ಉದ್ಯೋಗವಿಲ್ಲ, ಕೈಗಾ ರಿಕೆಗಳಿಗೆ ಉದ್ಯೋಗ ನೀಡಲು ಸಾಧ್ಯವಾಗು ತ್ತಿಲ್ಲ. ಕೊರೊನಾ ಸೋಂಕು ಹೆಚ್ಚಳದಲ್ಲಿ ಕರ್ನಾ ಟಕ ಪ್ರಥಮ ಸ್ಥಾನದಲ್ಲಿದೆ. 20 ಲಕ್ಷ ಸೋಂಕಿತರಿದ್ದಾರೆ.
ಈಗಾಗಲೇ 20 ಸಾವಿರ ಜನ ಮೃತಪಟ್ಟಿದ್ದಾರೆ ಎಂದು ಕಳವಳ ವ್ಯಕ್ತ ಪಡಿಸಿ, ದಿನೇದಿನೆ ಸೋಂಕು ಹೆಚ್ಚಳವಾಗುತ್ತಿದೆ. ದೇಶದ ಬಹುತೇಕ ರಾಜ್ಯಗಳು ಕಷ್ಟದಲ್ಲಿ ಸಿಲುಕಿವೆ ಎಂದು ವಿವರಿಸಿದರು.