Advertisement

ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನ ನೀಡಿ: ಕಡಾಡಿ ಮನವಿ

12:00 AM Aug 03, 2023 | Team Udayavani |

ನವದೆಹಲಿ: ಮೈಸೂರಿನ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿದರು.

Advertisement

ರಾಜ್ಯಸಭೆಯ ಮುಂಗಾರು ಅಧಿವೇಶನದ ವಿಶೇಷ ವೇಳೆಯಲ್ಲಿ ಬುಧವಾರ ವಿಷಯ ಪ್ರಸ್ತಾಪಿಸಿದ ಅವರು, “ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನ ಮಾನ ನೀಡಬೇಕು. ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರವು ಹೆಚ್ಚಿನ ಅನುದಾನವನ್ನು ಮೀಸಲಿರಿಸಬೇಕು’ ಎಂದು ಕೋರಿದರು.

“ಕನ್ನಡ ಭಾಷೆಗೆ 3,000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಸುಮಾರು ಆರು ಕೋಟಿಗೂ ಹೆಚ್ಚು ಜನರು ಕನ್ನಡ ಭಾಷೆ ಯನ್ನು ಮಾತೃಭಾಷೆ ಯಾಗಿ ಹೊಂದಿದ್ದಾರೆ. ಭಾರ ತದ ಅತ್ಯಂತ ಹಳೆಯ ಭಾಷೆ ಗಳಲ್ಲಿ ಕನ್ನಡ ಒಂದು. 2008 ರಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲಾಗಿದೆ. 2011ರಲ್ಲಿ ಮೈಸೂರಿನ ಭಾರತೀಯ ಭಾಷೆ ಗಳ ಕೇಂದ್ರ ಸಂಸ್ಥೆಯಲ್ಲಿ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ತೆರೆಯಲಾಗಿದೆ. ಈ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನದ ಜತೆಗೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ಈರಣ್ಣ ಕಡಾಡಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next