Advertisement

Street vendors: ಬೀದಿ ಬದಿ ವ್ಯಾಪಾರಿಗಳಿಗೆ ಪ್ರಮಾಣ ಪತ್ರ ಕೊಡಿ

02:33 PM Oct 09, 2023 | Team Udayavani |

ಚಾಮರಾಜನಗರ: ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ, ಮತದಾರರ ಪ್ರಮಾಣ ಪತ್ರಗಳನ್ನು ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ವಿತರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಮತ್ತು ಸ್ವ-ನಿಧಿಸೇ ಸಮೃದ್ಧಿಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಸುಸಜ್ಜಿತ ವಲಯ ಪ್ರಾರಂಭಿಸಿ: ಮಾರುಕಟ್ಟೆ ವಲಯ ಪ್ರಾರಂಭಿಸಲು ಸ್ಥಳ ಗುರುತಿಸಿ, ಈಗಾಗಲೇ ಅನುಮೋದನೆಯಾಗಿರುವಅನುದಾನ ಬಳಸಿ ಸುಸಜ್ಜಿತ ವಲಯ ಪ್ರಾರಂಭಿಸಲು ತಿಳಿಸಿದರು.

ಪಿಎಂ ಸ್ವ-ನಿಧಿ ಯೋಜನೆಯಡಿ 1ನೇ, 2ನೇ ಮತ್ತು 3ನೇ ಹಂತದಲ್ಲಿ ಬ್ಯಾಂಕುಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ವಾರದೊಳಗೆ ಪೂರ್ಣಗೊಳಿಸಲು ಸಂಬಂಧಿಸಿದ ಬ್ಯಾಂಕ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೂರ್ಣಗೊಳಿಸಿ: ಡಿಜಿಟಲ್‌ ಆನ್‌ ಬೋರ್ಡಿಂಗ್‌ ಮಾಡಲು ಬಾಕಿ ಇರುವ ಬೀದಿ ಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಮೂಲಕ ಎಲ್ಲರಿಗೂ ಕ್ಯೂ ಆರ್‌ ಕೋಡ್‌ ವಿತರಿಸಬೇಕು. ಸ್ವ-ನಿಧಿಸೇ ಸಮೃದ್ಧಿ ಯೋಜನೆಯಡಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು 10 ದಿನಗಳ ಒಳಗಾಗಿ ಪೂರ್ಣಗೊಳಿಸಬೇಕು. ಪ್ರತಿ ತಿಂಗಳು ಮೊದಲನೇ ವಾರ ಮೇಳ ಆಯೋಜಿಸಿ, 8 ಕೇಂದ್ರದ ಯೋಜನೆಗೆ ಜೋಡಣೆ ಮಾಡುವಂತೆ ತಿಳಿಸಿದರು.

Advertisement

ಸಹಕಾರ ಪಡೆಯಿರಿ: ಐಇಸಿ ಚಟುವಟಿಕೆಗೆ ಸಂಬಂಧಿಸಿದಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಬಿಡುಗಡೆಯಾಗಿರುವ ಅನುದಾನದಲ್ಲಿ ಪ್ರಚಾರಫ‌ಲಕ, ಫ್ಲೆಕ್ಸ್‌, ಕರ ಪತ್ರ ಮುಂತಾದವುಗಳ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು. ನಗರ ವ್ಯಾಪ್ತಿಯಲ್ಲಿ ವಾರ್ಡ್‌ವಾರು ಸಭೆ ನಡೆಸಿ ಜನಪ್ರತಿನಿಧಿಗಳ ಸಹಕಾರದೊಂದಿಗೆ ಯೋಜನೆ ಬಗ್ಗೆ ಅರಿವು ಮೂಡಿಸಲು ಸೂಚಿಸಿದರು.

ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು, ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸದಸ್ಯರು,ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next