Advertisement

ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ಕೊಡಿ: ಕಲಾವಿದರ ಮನವಿ

06:23 PM Jun 10, 2020 | keerthan |

ಬೆಂಗಳೂರು: ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವ ಮೂಲಕ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡುವಂತೆ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ಕಲಾವಿದರು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಬಳಿ ಮನವಿ ಮಾಡಿದ್ದಾರೆ.

Advertisement

ಹಿರಿಯ ಕಲಾವಿದರಾದ ಡಿಂಗ್ರಿ ನಾಗರಾಜ್‌, ಲಕ್ಷ್ಮಿ ದೇವಮ್ಮ, ಬಿ.ಎಲ್‌. ಮಂಜುಳಾ, ಗಣೇಶ್‌ ರಾವ್‌, ಬೆಂಗಳೂರು ನಾಗೇಶ್‌, ಶೋಭಾ ರಾಘವೇಂದ್ರ ಸೇರಿದಂತೆ ಹಿರಿಯ ಕಲಾವಿದರು ಡಾ. ಅಶ್ವತ್ಥನಾರಾಯಣ ಅವರನ್ನು ಬುಧವಾರ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಕಲಾವಿದರ ಸಮಸ್ಯೆಗಳನ್ನು ಆಲಿಸಿದ ಡಾ. ಅಶ್ವತ್ಥನಾರಾಯಣ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜತೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ಅಶ್ವತ್ಥ ನಾರಾಯಣ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next