Advertisement

ಪ್ರತಿಯೊಬ್ಬರಿಗೂ ಕೆಲಸ ಕೊಡಿ

06:50 AM May 09, 2020 | Suhan S |

ಕೋಹಳ್ಳಿ: ಕೋವಿಡ್ 19 ಸಂಕಷ್ಟದ ಸಮಯದಲ್ಲೂ ದೇಶದ ಜನತೆಯ ಹಸಿವು ನೀಗಿಸುತ್ತಿರುವ ಅನ್ನದಾತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ  ಯೋಜನೆಯಡಿ 17,986 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಅದರಂತೆ ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

Advertisement

ಅವರು ಗ್ರಾಮದ ದೊಡ್ಡ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಕೆಲಸ ಬೇಡುವ ಎಲ್ಲರಿಗೂ ಕೆಲಸ ಕೊಡಬೇಕು. ದಿನಕ್ಕೆ 275 ರೂ. ಕೂಲಿ ನೀಡಲಾಗುತ್ತಿದೆ. ಲಾಕ್‌ಡೌನ್‌ ಸಡಿಲಿಕೆಯಾಗಿದೆ ಎಂದು ಅನಾವಶ್ಯಕವಾಗಿ ತಿರುಗಾಡಬೇಡಿ. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು. ಅಥಣಿ ತಾಲೂಕಿನಲ್ಲಿ ಕೊರೊನಾ ಬರದ ಹಾಗೆ ಎಚ್ಚರಿಕೆಯಿಂದ ಇರಬೇಕು ಎಂದರು.

ಅಥಣಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ರೈತರು ಅನೇಕ ವೈಯಕ್ತಿಕ ಕೆಲಸ ಮಾಡಿಕೊಳ್ಳಬಹುದು. ಇದರ ಸದುಪಯೋಗವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಚಿಕ್ಕೋಡಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಿದಾನಂದ ಸವದಿ, ತಾಪಂ ಇಒ ರವೀಂದ್ರ ಬಂಗಾರೆಪ್ಪನ್ನವರ, ಉದಯಗೌಡ ಪಾಟೀಲ, ಪ್ರಕಾಶ ಮೋರೆ, ಪಿಡಿಒ ಈರಪ್ಪ ತಮದಡ್ಡಿ, ಗ್ರಾಪಂ ಉಪಾಧ್ಯಕ್ಷ ಶ್ರೀಕಾಂತ ಆಲಗೂರ, ರಮೇಶ ಉಮರಾಣಿ, ಮಲಿಕಸಾಬ ಪಡಸಲಗಿ, ಹಣಮಂತ ಕನ್ನಾಳ, ಕುಮಾರ ಪಾತೂಟ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next