Advertisement

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ವೀಣಾ ಕಾಶಪ್ಪನವರ

12:57 PM May 17, 2019 | Suhan S |

ಬಾಗಲಕೋಟೆ: ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಅವರನ್ನು ದೇಶದ ಆಸ್ತಿಯನ್ನಾಗಿ ಮಾಡುವ ಹೊಣೆಗಾರಿಕೆ ತಾಯಂದಿರ ಮೇಲಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.

Advertisement

ಬಿಲ್ಕೆರೂರ ಬಿಲ್ವಾಶ್ರಮ ಹಿರೇಮಠದಲ್ಲಿ ಲಿಂ| ರುದ್ರಮುನಿ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳವರ ಜನ್ಮ ಶತಮಾನೋತ್ಸವದ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕು ಆ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯ ಉಳಿಸಬೇಕು ಎಂದರು.ಪ್ರತಿಯೊಬ್ಬರು ಆಧ್ಯಾತ್ಮದ ಪ್ರಜ್ಞೆ ಹೊಂದಿರಬೇಕು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪುರಾಣ, ಪ್ರವಚನ ಆಲಿಸಬೇಕು. ಅಂದಾಗ ನಮ್ಮಲ್ಲಿ ಉತ್ತಮ ಸಂಸ್ಕಾರ ಬೆಳೆಯಲು ಸಾಧ್ಯ. ಜೀವನದಲ್ಲಿ ಮುಕ್ತಿ ಪಡೆಯಬೇಕಾದರೆ ಗುರುವಿಗೆ ಶರಣಾಗಬೇಕು ಎಂದು ಹೇಳಿದರು.

ಸಾಹಿತಿ ಇಂದುಮತಿ ಸಾಲಿಮಠ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಗಿರಿಸಾಗರದ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಬಿಲ್ಕೆರೂರ ಮಠದ ಪರಂಪರೆ ಮತ್ತು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಶ್ರೀಮಠ ನೀಡಿದ ಕೊಡುಗೆ ಸ್ಮರಿಸಿ ಲಿಂ| ರುದ್ರಮುನಿ ಶಿವಯೋಗಿಗಳು ಮೌನ ತಪಸ್ವಿಗಳಾಗಿ ಲೋಕ ಕಲ್ಯಾಣ ಕಾರ್ಯ ಮಾಡುವ ಮೂಲಕ ಭಕ್ತರ ಹೃದಯದಲ್ಲಿ ನೆಲೆಸಿದ್ದಾರೆ ಎಂದು ಹೇಳಿದರು. ಸಿಂದಗಿ ಸಾರಂಗಮಠದ ಪ್ರಭುಸಾರಂಗದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಗುಳೇದಗುಡ್ಡದ ಕಾಡಸಿದ್ದೇಶ್ವರ ಶಿವಾಚಾರ್ಯರು, ಮುತ್ತತ್ತಿಯ ಗುರುಲಿಂಗ ಶಿವಾಚಾರ್ಯರು, ಡಾ|ಮಾಲಿನಿ ಪಾಟೀಲ, ಕಮಲಾ ಕುಂಬಾರ, ಜಿಪಂ ಸದಸ್ಯೆ ಕವಿತಾ ದಡ್ಡಿ, ಲತಾ ಗೂಳಿ, ಶಿವಮ್ಮ ಮೇಟಿ, ಅನ್ನಪೂರ್ಣಾ ದೊಡ್ಡನಗೌಡ್ರ ವೇದಿಕೆಯಲ್ಲಿದ್ದರು. ಬೇವೂರಿನ ಮಲ್ಲಮ್ಮ ತುರಡಗಿ ಹಾಗೂ ಬಂಧುಗಳು ಶ್ರೀಮಠದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ ತುಲಾಭಾರ ಸೇವೆಗೈದರು.

Advertisement

Udayavani is now on Telegram. Click here to join our channel and stay updated with the latest news.

Next