Advertisement

ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಗೆ ಪ್ರಾಶಸ್ತ್ಯ ನೀಡಿ

12:49 PM Apr 08, 2022 | Team Udayavani |

ಮಹಾನಗರ: ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಅವರು ಹೇಳಿದ್ದಾರೆ. ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಬ್ಯಾಂಕ್‌ ಆಫ್‌ ಬರೋಡದ ಮಂಗಳೂರು ವಲಯದ ಕಚೇರಿಯಲ್ಲಿ ಗುರುವಾರ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಬ್ಯಾಂಕುಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಅರ್ಜಿ, ಚಲನ್‌, ನಾಮ ಫಲಕಗಳು, ಜಾಹೀರಾತುಗಳು, ನಮೂನೆ, ಚೆಕ್‌, ರಸೀದಿ ಸಹಿ ತ ಇತ್ಯಾದಿಗಳು ಕನ್ನಡದಲ್ಲೇ ಮುದ್ರಿತಗೊಂಡು ಗ್ರಾಹಕರ ಕೈಸೇರಬೇಕು. ಹಿಂದಿ-ಇಂಗ್ಲಿಷ್‌ ಭಾಷೆಗೆ ನೀಡುವ ಸ್ಥಾನಮಾನ ಕನ್ನಡ ಭಾಷೆಗೂ ದೊರಕಬೇಕು ಎಂದರು. ಹೊರ ರಾಜ್ಯಗಳಿಂದ ಬರುವ ಉದ್ಯೋಗಿಗಳು ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕು, ಅದಕ್ಕೆ ಅನುಕೂಲವಾಗುವಂತಹ ತರಬೇತಿಗಳನ್ನು ಆಯೋಜಿಸಬೇಕು. ಒಂದು ವೇಳೆ ಕನ್ನಡವನ್ನು ಕಲಿಯದೇ, ಕನ್ನಡವನ್ನು ಬಳಸದೇ ಹೋದಲ್ಲಿ ಅಂತಹ ಉದ್ಯೋಗಿಗಳ ವಿರುದ್ಧ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ರೈತರಿಗೆ, ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಅರ್ಥವಾಗಲು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌, ಮೊಬೈಲ್‌ ಬ್ಯಾಂಕಿಂಗ್‌ನಲ್ಲಿ ಕನ್ನಡ ಭಾಷೆಯನ್ನು ಅನುಷ್ಠಾನಕ್ಕೆ ತರಬೇಕು. ಬ್ಯಾಂಕುಗಳಲ್ಲಿರುವ ಕನ್ನಡ ಘಟಕಗಳಲ್ಲಿ ಕನ್ನಡ ಭಾಷೆಗೆ ಸಂಬಂಧಿಸಿದ ಎಲ್ಲ ಆಚರಣೆಗಳನ್ನು ನಡೆಸಬೇಕು. ಬ್ಯಾಂಕುಗಳ ಮಾಸಪತ್ರಿಕೆಗಳಲ್ಲಿಯೂ ಕನ್ನಡ ಭಾಷೆಯ ಲೇಖನಗಳಿರಬೇಕು. ಕರ್ನಾಟಕದಲ್ಲಿ ವ್ಯಹರಿಸುವ ಭಾಷೆಗಳೇ ಕನ್ನಡವನ್ನು ಬಳಸದೆ ಇತರೆ ಭಾಗಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ಮುಂದೆ ಕನ್ನಡವನ್ನು ಹುಡುಕುವ ಪರಿಸ್ಥಿತಿ ಎದುರಾಗಬಹುದು ಎಂದರು.

ಬ್ಯಾಂಕ್‌ನ ವಲಯ ಮಹಾ ಪ್ರಬಂಧಕರಾದ ಗಾಯತ್ರಿ, ಉಪ ಮಹಾ ಪ್ರಬಂಧಕ ಗೋಪಾಲಕೃಷ್ಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಮೇಶ್‌ ಗುಬ್ಬಿಗೂಡು, ಕಾರ್ಯದರ್ಶಿ ಡಾ| ಸಂತೋಷ್‌, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್‌ ಸಹಿತ ಇತರ ಬ್ಯಾಂಕ್‌ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next