Advertisement

ಬೋಗೂರ ಬಾಲಕಿ ಕುಟುಂಬಕ್ಕೆ ನ್ಯಾಯ ಕೊಡಿ

09:22 AM Aug 11, 2020 | Suhan S |

ಧಾರವಾಡ: ಲೈಂಗಿಕ ದೌರ್ಜನ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಬೋಗೂರ ಗ್ರಾಮದ ಬಾಲಕಿ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಅಖೀಲ ಭಾರತ ವೀರಶೈವ ಮಹಾಸಭೆಯ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದು, ಅಮಾನವೀಯ ಕೃತ್ಯ. ಈ ಕೃತ್ಯಕ್ಕೆ ಕಾರಣವಾದ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಮೂಲಕ ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಈ ಪ್ರಕರಣದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ, ಆರೋಪಿಗೆ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಖೀಲ ಭಾರತ ವೀರಶೈವ ಮಹಾಸಭೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ್‌, ಕೋಶಾಧ್ಯಕ್ಷ ಬಿ.ಎಸ್‌.ಗೋಲಪ್ಪನವರ, ನಗರ ಘಟಕದ ಅಧ್ಯಕ್ಷ ಎಂಎಫ್‌.ಹಿರೇಮಠ, ಮಹಿಳಾ ಘಟಕದ ಅಧ್ಯಕ್ಷ ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೈಲಾರ ಉಪ್ಪಿನ ಮುಖಂಡರಾದ ಶಂಕರ ಕುಂಬಿ, ಸಂಗಮೇಶ ಅಂಗಡಿ, ಶ್ರೀಶೈಲಗೌಡ ಕಮತರ, ಮುತ್ತು ಬೆಳ್ಳಕ್ಕಿ ಇದ್ದರು.

ಬೋಗೂರ ಗ್ರಾಮದ ಬಾಲಕಿ ಮನೆಗೆ ಸೋಮವಾರ ಮಾಜಿ ಸಚಿವ ವಿನಯ ಕುಲಕರ್ಣಿ ಭೇಟಿ ನೀಡಿದರು. ಈ ವೇಳೆ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು, ವೈಯಕ್ತಿಕವಾಗಿ 25 ಸಾವಿರ ರೂ.ಗಳ ನೆರವು ನೀಡಿದರು. ಈ ವೇಳೆ ಮಾತನಾಡಿದ ಕುಲಕರ್ಣಿ, ಈ ಕೃತ್ಯ ಎಸಗಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು. ಈ ಮೂಲಕ ಮತ್ತೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಶಿಕ್ಷೆ ಕೊಡುವಂತಾಗಬೇಕೆಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next