Advertisement

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

12:25 AM Oct 06, 2024 | Team Udayavani |

ಬೆಂಗಳೂರು: ಬಗರ್‌ ಹುಕುಂ ಅರ್ಜಿ ವಿಲೇವಾರಿ ಕೆಲಸಗಳಿಗೆ 2 ತಿಂಗಳು ಗಡುವು ನೀಡ ಲಾಗುತ್ತಿದ್ದು, ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರ್‌ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

Advertisement

ರಾಜ್ಯದ ಎಲ್ಲ ತಹಶೀಲ್ದಾರ್‌ ಹಾಗೂ ಉಪ ವಿಭಾಗಾಧಿಕಾರಿಗಳ ಜತೆಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಿದ ಅವರು, ಬಗರ್‌ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಮೀನಮೇಷ ಎಣಿಸು ವುದು ಸರಿಯಲ್ಲ. ನವೆಂಬರ್‌ ಅಂತ್ಯದವರೆಗೆ ಗಡುವು ನೀಡ ಲಾಗಿದ್ದು, ಈ ಅವಧಿಯಲ್ಲೂ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂ ರಾಗದಿದ್ದರೆ ನೋಟಿಸ್‌ ಜಾರಿ ಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಅರ್ಹ ಭೂಹೀನರಿಗೆ ಜಮೀನು ಮಂಜೂರು ಮಾಡ ಬೇಕೆಂಬುದು ಸರಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ಸರ ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯಡಿ ಬಗರ್‌ ಹುಕುಂ ಅರ್ಜಿ ಆಹ್ವಾನಿಸ ಲಾಯಿತು. 1 ವರ್ಷದಿಂದ ನಾನೇ ಖುದ್ದಾಗಿ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ನಡೆಸಿ ಬಗರ್‌ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದ್ದೇನೆ. ಆದರೂ ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ ಎಂದರು.

ಗ್ರ್ಯಾಂಟ್ ಗೆ ವಿಳಂಬ ಬೇಡ
ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್‌ ಹುಕುಂ ಕಮಿಟಿ ಸಭೆ ನಡೆಸಲು ಶಾಸಕರು ಸಮಯ ನೀಡದಿದ್ದರೆ ನನಗೆ ತಿಳಿಸಿ, ನಾನು ಅವರ ಜತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಈಗಾಗಲೇ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಅವರನ್ನು ಅನಗತ್ಯವಾಗಿ ಫೀಲ್ಡ…ಗೆ ಕಳುಹಿಸಬೇಡಿ. ಈಗಾಗಲೇ ಸಲ್ಲಿಕೆಯಾಗಿರುವ ಬಗರ್‌ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಯಾವುವು ಎಂದು ತಹಶೀಲ್ದಾರ್‌ಗಳಿಗೆ ಪ್ರಾಥಮಿಕ ಪರಿಶೀಲನೆಯಲ್ಲೇ ತಿಳಿಯುತ್ತದೆ. ಅದನ್ನು ಅಧಿಕಾರಿಗಳು ಕಚೇರಿಯಲ್ಲೇ ಮುಗಿಸಿ ಎಂದು ತಾಕೀತು ಮಾಡಿದರು.

6 ತಿಂಗಳಲ್ಲಿ 14.85 ಲಕ್ಷ ಸಾಗುವಳಿ ಅರ್ಜಿ ವಿಲೇವಾರಿ
ಭೂ ಸಾಗುವಳಿದಾರರಿಗೆ ಸರಕಾರ ಇದೀಗ ಸಂತಸ ಸುದ್ದಿ ನೀಡಿದೆ. ಸುಮಾರು 14 ಲಕ್ಷದ 85 ಸಾವಿರ ಸಾಗುವಳಿ ಅರ್ಜಿಗಳು ಸರಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂದಿನ ಆರು ತಿಂಗಳ ಒಳಗೆ ಎಲ್ಲ ಅರ್ಜಿಗಳನ್ನು ಸಂಪೂರ್ಣ ವಿಲೇವಾರಿ ಮಾಡಲಾಗುವುದು ಎಂದು ಕೃಷ್ಣ ಭೈರೇಗೌಡ ಘೋಷಣೆ ಮಾಡಿದರು.

Advertisement

ಗಾಂಧಿಭವನದಲ್ಲಿ ಶನಿವಾರ ನಡೆದ ಭೂಮಿ ವಸತಿ ಹಕ್ಕು ವಂಚಿತ ಪ್ರಾತಿನಿಧ್ಯ ಸಮಾವೇಶದಲ್ಲಿ ಅವರು ಮಾತನಾಡಿದರು. ಸಾಗವಳಿ ಚೀಟಿ ನೀಡುವುದು ಕಾಂಗ್ರೆಸ್‌ ಸರಕಾರದ ಕಾರ್ಯಕ್ರಮವಾಗಿದೆ. 2018ರಲ್ಲಿ ಸರಕಾರ ಈ ಯೋಜನೆಯನ್ನು ರೂಪಿಸಿತ್ತು. 2018ರಿಂದ 22ರವಗೆ ಸುಮಾರು 14 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆ ಆಗಿವೆ. ರೈತರು ಅರ್ಜಿ ಸಲ್ಲಿಕೆ ಮಾಡಿ ಹಲವು ವರ್ಷಗಳ ಕಳೆದಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅರ್ಜಿ ವಿಲೇವಾರಿಗೆ ಸೂಚನೆ ನೀಡಿದ್ದಾರೆ. ಶೀಘ್ರದಲ್ಲೇ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು ಇಲಾಖೆ ಆರಂಭಿಸಲಿದೆ ಎಂದರು.

ಪರ-ವಿರೋಧ ನೋಡುವುದಿಲ್ಲ
ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಸರಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್‌ಗಳ ಜತೆ ಸಭೆ ನಡೆಸಿದ್ದೇನೆ. ಅರ್ಜಿ ಹಾಕಿದ ಎಲ್ಲ ರೈತರಿಗೂ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಲಾಗಿದೆ. ಈ ಬಾರಿ ಬಗರ್‌ ಹುಕಂ ಕಮಿಟಿಯಲ್ಲಿ ಸಕ್ರಮದ ಜತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಳ್ಳಲಾಗುತ್ತಿದೆ. ರೈತರ ಎಲ್ಲ ದಾಖಲೆಗಳನ್ನು ಡಿಜಿಟಲ್‌ ಮಾಡಿಕೊಡುತ್ತಿದೆ. ಸರಕಾರ ಪರ ವಿರೋಧ ನೋಡದೆ ಎಲ್ಲ ರೈತರಿಗೂ-ಬಡವರಿಗೆ ಸಾಗುವಳಿ ಚೀಟಿ ನೀಡಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next