Advertisement

ಭಾರತ್‌ ಜೋಡೋ ಯಾತ್ರೆಗೆ ಹೆಚ್ಚಿನ ಸಹಕಾರ ನೀಡಿ

06:27 PM Sep 23, 2022 | Team Udayavani |

ಯಳಂದೂರು:ಕಾಂಗ್ರೆಸ್‌ ಪಕ್ಷದ ವತಿಯಿಂದ ಕನ್ಯಾಕುಮಾರಿಯಿಂದ ಆರಂಭಗೊಂಡಿರುವ ಭಾರತ್‌ ಜೋಡೋ ಯಾತ್ರೆ ಸೆ.30 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು ಇದಕ್ಕಾಗಿ ಪಕ್ಷದ ಕಾರ್ಯಕರ್ತರು, ಸಂಘಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು ಸೇರಿದಂತೆ ಎಲ್ಲಾ ಅಭಿಮಾನಿ ವರ್ಗ ತಪ್ಪದೆ ಹಾಜರಾಗಬೇಕು ಎಂದು ಮಾಜಿ ಶಾಸಕ ಎಸ್‌. ಬಾಲರಾಜು ಮನವಿ ಮಾಡಿದರು.

Advertisement

ಅವರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಗುಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ದೇಶದ ರಾಜಕೀಯ ಇತಿಹಾಸದಲ್ಲಿ ಸ್ವತಂತ್ರ ಭಾರತಕ್ಕೆ ಅನೇಕ ತ್ಯಾಗ ಬಲಿದಾನ ನೀಡಿದ ಪಕ್ಷವಾಗಿದೆ ಎಂದರು.

ನೆಹರು 9 ವರ್ಷ ಜೈಲಿನಲ್ಲಿದ್ದು ಸ್ವತಂತ್ರ ಸಂಗ್ರಾಮದಲ್ಲಿ ಭಾಗವಹಿಸಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ಆಧುನಿಕ ಭಾರತದ ಕನಸಿಗೆ ರೆಕ್ಕೆ ಕಟ್ಟಿದ್ದರು. ನಂತರ ಇಂದಿರಾಗಾಂಧಿ, ರಾಜೀವ್‌ ಗಾಂಧಿ ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದರು. ನಂತರ ಸೋನಿಯಾಗಾಂಧಿ ಪ್ರಧಾನಿಯಾಗುವ ಅವಕಾಶವಿದ್ದರೂ ಇದನ್ನು ತಿರಸ್ಕರಿಸಿ ಮನಮೋಹನ್‌ಸಿಂಗ್‌ರನ್ನು ಪ್ರಧಾನಿ ಮಾಡಿ ದೇಶವನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಿದರು.

ಅಧಿಕಾರದ ಲಾಲಸೆ ಇಲ್ಲದೆ ಕಾಂಗ್ರೆಸ್‌ ಪಕ್ಷ ಬಡವರು, ಕಾರ್ಮಿಕರು, ಶ್ರಮಿಕ ವರ್ಗದ ಪರವಾಗಿ ಹತ್ತು ಹಲವು ಯೋಜನೆಗಳನ್ನು ನೀಡಿದೆ. ಆದರೆ ಕಳೆದ 8 ವರ್ಷದಿಂದ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದು ಹೊಸ ಕಾನೂನುಗಳನ್ನು ಜನರ ಮೇಲೆ ಏರುತ್ತಿದೆ ವಿನಹ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ.

ಸೆ.30ಕ್ಕೆ ಗುಂಡ್ಲುಪೇಟೆಗೆ ಪಾದಯಾತ್ರೆ: ಪ್ರತಿಯೊಂದು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ಸಾರ್ವಜನಿಕರ ಬದುಕು ನಡೆಸಲು ದುಸ್ತರವಾಗುತ್ತಿದೆ. ಇದನ್ನು ಮನವರಿಕೆ ಮಾಡಿಕೊಡಲು ಕಾಂಗ್ರೆಸ್‌ ಪಕ್ಷದ ರಾಹುಲ್‌ಗಾಂಧಿ ಭಾರತ್‌ ಜೋಡೋ ಎಂಬ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಂಡಿದ್ದರು ಸೆ.30 ರಂದು ಇದು ಗುಂಡ್ಲುಪೇಟೆಗೆ ಆಗಮಿಸಲಿದೆ. ಇಲ್ಲಿಗೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಭಾಗವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದ್ದು ಗುಂಡ್ಲುಪೇಟೆಯಿಂದ ಬೇಗೂರಿನ ತನಕ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Advertisement

ಪಾದಯಾತ್ರೆ ಯಶಸ್ವಿಗೊಳಿಸಿ: ಮಾಜಿ ಶಾಸಕ ಎಸ್‌. ಜಯಣ್ಣ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಿಂದಲೂ ಬಸ್‌ ವ್ಯವಸ್ಥೆ ಮಾಡಲಾಗಿದ್ದು ಅಂದು ಬೆಳಿಗ್ಗೆ ಉಪಾಹಾರ, ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿದ್ದು ಇಂತಹ ಒಂದು ಪಾದಯಾತ್ರೆಯಲ್ಲಿ ಪ್ರತಿಯೊಬ್ಬರೂ ತಪ್ಪದೆ ಹಾಜರಾಗಿ ಇದನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ. ಚಂದ್ರು, ಕಾಂಗ್ರೆಸ್‌ ಪಕ್ಷದ ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಕೃಷ್ಣಾಪುರ ಎಂ.ದೇವರಾಜು, ಜಿಪಂ ಮಾಜಿ ಉಪಾಧ್ಯಕ್ಷೆ ಕೇತಮ್ಮ, ಕಿನಕಹಳ್ಳಿ ಪ್ರಭುಪ್ರಸಾದ್‌, ಕಂದಹಳ್ಳಿ ನಂಜುಂಡಸ್ವಾಮಿ, ವೆಂಕಟೇಶ್‌ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next