ವಿಧಾನಸಭೆ: ಹೊಸ ಅಂಗನವಾಡಿ ನೀಡುವಾಗ ಮಕ್ಕಳ ಜನಸಂಖ್ಯೆ ನೋಡದೆ ಕೊಡುವಂತೆ ಶಾಸಕ ಹರತಾಳು ಹಾಲಪ್ಪ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್ ಅವರಿಗೆ ಈ ಮನವಿ ಮಾಡಿದ್ದಾರೆ. ಜತೆಗೆ ಮಿನಿ ಅಂಗನವಾಡಿಯನ್ನು ಮೇಲ್ದರ್ಜೆಗೇರಿಸುವಂತೆ ಅವರು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಹಾಲಪ್ಪ ಆಚಾರ್, ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸುವುದಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಮಾಡಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ:ಜೆಫ್ ಬೆಜೋಸ್ ಹಿಂದಿಕ್ಕಿದ ಉದ್ಯಮಿ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿ: ವರದಿ
3,341ರಲ್ಲಿ 1,002 ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲು ಕೇಂದ್ರಕ್ಕೆ ಕೇಳಿದ್ದೇವೆ. ಕೇಂದ್ರ ಒಪ್ಪಿದರೆ ಮೇಲ್ದರ್ಜೆಗೆ ಏರಿಸುತ್ತೇವೆ. ಜತೆಗೆ 4450 ಹೊಸ ಅಂಗನವಾಡಿ ಕೇಂದ್ರ ಸ್ಥಾಪನೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.