Advertisement

ಕಮಿಷನ್ ಪಡೆಯುವ ಬಿಜೆಪಿಗೆ ಕೇವಲ 40 ಸೀಟುಗಳನ್ನು ನೀಡಿ: ಭಾಲ್ಕಿಯಲ್ಲಿ Rahul Gandhi

03:31 PM Apr 17, 2023 | Team Udayavani |

ಬೀದರ್ : ರಾಜ್ಯದಲ್ಲಿ 40% ಕಮಿಷನ್ ಪಡೆಯುವ ಬಿಜೆಪಿ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಕೇವಲ 40 ಸೀಟುಗಳನ್ನು ನೀಡುವ ಮೂಲಕ ಭ್ರಷ್ಟಾಚಾರವನ್ನು ತೊಲಗಿಸಬೇಕು. ನಿಮ್ಮ ಪ್ರತಿ ಮತಗಳು ಬಿಜೆಪಿಯ ಭ್ರಷ್ಟ ಮತ್ತು 40% ಕಮಿಷನ್ ಸರ್ಕಾರ ತೊಲಗಿಸುವ ಅಸ್ತ್ರವಾಗಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದರು.

Advertisement

ಜಿಲ್ಲೆಯ ಭಾಲ್ಕಿಯಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರ ನಾಮಪತ್ರ ಸಲ್ಲಿಕೆ ಪ್ರಯುಕ್ತ ಹಮ್ಮಿಕೊಂಡಿದ್ದ ಜೈ ಭಾರತ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150 ಸ್ಥಾನಗಳಲ್ಲಿ ಗೆಲ್ಲಿಸುವ ಮೂಲಕ ಮತ್ತೊಮ್ಮೆ ಪೂರ್ಣ ಬಹುಮತದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಇಲ್ಲವಾದರೆ ಬಿಜೆಪಿ ಮತ್ತೆ 40% ಭಭ್ರಷ್ಟಾಚಾರದ ಹಣದಿಂದ ನಿಮ್ಮ ಶಾಸಕರಗಳನ್ನು ಖರೀದಿಸಲು ಯತ್ನಿಸುತ್ತಾರೆ. ಇದಕ್ಕೆ ಮತದಾರರು ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ರಾಜ್ಯ ಬಿಜೆಪಿಯದ್ದು 40% ಕಮಿಷನ್ ಸರ್ಕಾರ ಎಂಬುದು ಕಾಂಗ್ರೆಸ್‌ನ ಆರೋಪವಲ್ಲ, ನೊಂದಾಯಿತ ಗುತ್ತಿಗೆದಾರರ ಸಂಘವೇ ಪ್ರಧಾನಿ ಮೋದಿಗೆ ಪತ್ರದ ಮೂಲಕ ದೂರು ನೀಡಿದೆ. ಆದರೆ, ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗೆಗೆ ಪತ್ರಕ್ಕೆ ಪ್ರಧಾನಿ ಉತ್ತರವೇ ನೀಡಲಿಲ್ಲ. ಬಿಜೆಪಿ ಶಾಸಕನ ಪುತ್ರನ ಲಂಚಾವತರಾ, ಪಿಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ಸೇರಿ ಅನೇಕ ಹಗರಗಳು ನಡೆದಿರುವುದು ಸಾಬೀತಾಗಿದೆ. ಆದರೂ ವೇದಿಕೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಭಾಷಣ ಮಾಡುವ ಪ್ರಧಾನಿ ಮೋದಿ ಕರ್ನಾಟಕದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ಮೋದಿ- ಅದಾನಿ ನಂಟು ಬಗ್ಗೆ ಪ್ರಶ್ನೆ ಮಾಡಿದಕ್ಕೆ ನನ್ನನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಿದ್ದು, ಈ ಮೂಲಕ ನನ್ನ ಬಾಯಿ ಮುಚ್ಚಿಸಲು ಯತ್ನಿಸಲಾಗುತ್ತಿದೆ. ಮಾತನಾಡುವಾಗ ಮೈಕ್‌ನ್ನು ಬಂದ್ ಮಾಡಿಸಿ, ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಆದರೆ, ಈ ಬಗ್ಗೆ ಉತ್ತರ ಸಿಗುವವರೆಗೂ ನನ್ನ ಹೋರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next