Advertisement
ಬ್ರಿಮ್ಸ್ ಆಸ್ಪತ್ರೆಗೆ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸಿದ ಬಳಿಕ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಬ್ರಿಮ್ಸ್ ಆಸ್ಪತ್ರೆಯ ನಿರ್ದೇಶಕರು ಹಾಗೂ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು. ಆಸ್ಪತ್ರೆಯ ಎಲ್ಲ ಮಹಡಿಗಳನ್ನು ಸುತ್ತಿದಾಗ ಎಲ್ಲ ಕಡೆಗಳಲ್ಲೂ ಕಣ್ಣಿಗೆ ಅಶುಚಿತ್ವವೇ ಕಂಡುಬರುತ್ತಿದೆ. ಅಲ್ಲಲ್ಲಿ ಕೆಲವು ವಾರ್ಡ್‌ಗಳು ಖಾಲಿ ಬಿದ್ದಿವೆ. ಹೀಗಾದರೆ ಹೇಗೆ. ಈ ಬಗ್ಗೆ ಅಧಿಕಾರಿಗಳು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ವೈದ್ಯಾಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬರುವ ಆರು ತಿಂಗಳೊಳಗೆ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸೇರಿ ಬೀದರ ಜನರಿಗೆ ಒಳ್ಳೆಯದನ್ನು ಮಾಡಬೇಕಿದೆ ಎಂದು ತಿಳಿಸಿದರು.
ಕೆಆರ್‌ಡಿಬಿ ಯೋಜನೆಯಲ್ಲಿ ಅನುದಾನ ಮೀಸಲಿದ್ದು, ಕ್ರಿಯಾ ಯೋಜನೆ ತಯಾರಿಸಿ ಕೆಲಸ ಮಾಡಿ ಎಂದರು.
Related Articles
Advertisement
ಸಚಿವರಿಂದ ಆಸ ಚಿವರಿಂದ ಆಸ್ಪತ್ರೆ ವ್ಯವಸ್ಥೆಪರಿಶೀಲನೆ ಪರಿಶೀಲನೆಬೀದರ: ನಗರದ ಬ್ರಿಮ್ಸ್ ಆಸ್ಪತ್ರೆಗೆ ಗುರುವಾರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಖುದ್ದು ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ವೀಕ್ಷಿಸಿದರು. ಆಯಾ ವಾರ್ಡ್‌ಗಳಲ್ಲಿನ ರೋಗಿಗಳೊಂದಿಗೆ ಮಾತನಾಡಿ, ವೈದ್ಯರು ನೀಡುತ್ತಿರುವ ಚಿಕಿತ್ಸೆ ಹಾಗೂ ಸೌಕರ್ಯಗಳ ಕುರಿತು ವಿಚಾರಿಸಿದರು. ಈ ವೇಳೆ ರೋಗಿಗಳು ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ವಿವರಿಸಿದರು. ರೋಗಿಗಳ ಮಾತು
ಆಲಿಸಿದ ಸಚಿವರು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ತರಾಟೆ ತೆಗೆದುಕೊಂಡರು. ಸರ್ಕಾರಿ ಆಸ್ಪತ್ರೆಗಳಿಗೆ ಬಡವರು ಬರುತ್ತಾರೆ. ಅವರ ಆರೋಗ್ಯ ಕಾಪಾಡುವುದು ಆಸ್ಪತ್ರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿದೆ. ತಮ್ಮ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿ ಇಲ್ಲವಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಅಲ್ಲಲ್ಲಿ ಅಶುಚಿತ್ವವನ್ನು ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ
ವಿಷಯಕ್ಕೆ ಪ್ರಥಮ ಆಧ್ಯತೆ ನೀಡಿ, ಸ್ವತ್ಛತೆಗೆ ಒತ್ತು ಕೊಡಿ ಎಂದು ಬ್ರಿಮ್ಸ್ ನಿರ್ದೇಶಕ ಡಾ| ಚೆನ್ನಣ್ಣ ಅವರಿಗೆ ನಿರ್ದೇಶನ ನೀಡಿದರು. ಎಲ್ಲ ವಾರ್ಡ್‌ಗಳಲ್ಲಿ ಸರಿಯಾಗಿ ಬೆಳಕು, ಗಾಳಿ ಬರುವ ಹಾಗೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಆಸ್ಪತ್ರೆಗೆ ಬರುವ
ರೋಗಿಗಳಿಗೆ ಬಹುತೇಕ ಎಲ್ಲ ಸೌಕರ್ಯ ಇಲ್ಲಿಯೇ ಸಿಗುವಂತಾಗಬೇಕು. ಈ ಹಿನ್ನೆಲೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಔಷಧ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿ ಸಿದ ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ವಾರ್ಡ್‌ಗಳಿಗೆ ಭೇಟಿ ನೀಡುವ ವೇಳೆ ಅಲ್ಲಲ್ಲಿ ಕೆಲವೊಂದು ವಾರ್ಡ್‌ಗಳು ಖಾಲಿಯಾಗಿರುವುದನ್ನು ಗಮನಿಸಿದ ಸಚಿವರು, ವಾರ್ಡ್‌ಗಳನ್ನು ಹೀಗೆ ಅನವಶ್ಯಕವಾಗಿ ಖಾಲಿ ಇರುವಂತೆ ಬಿಡಬೇಡಿ. ವೈದ್ಯಕೀಯ ಉಪಕರಣಗಳು, ಯಂತ್ರೋಪಕರಣಗಳನ್ನು ಕೂಡಲೇ ಹಾಕಿ ಆಸ್ಪತ್ರೆಯು ಅಚ್ಚುಕಟ್ಟಾಗಿರುವ ಹಾಗೆ ನೋಡಿಕೊಳ್ಳಿರಿ ಎಂದು ತಿಳಿಸಿದರು. ಶಾಸಕ ರಹೀಂ ಖಾನ್, ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ, ವೈದ್ಯಾಧಿಕಾರಿಗಳಾದ ಡಾ| ಸಿ.ಎಸ್. ರಗಟೆ
ಸೇರಿದಂತೆ ಬ್ರಿಮ್ಸ್ ಆಸ್ಪತ್ರೆಯ ಇನ್ನಿತರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.