Advertisement

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

09:00 PM Oct 01, 2019 | Lakshmi GovindaRaju |

ಕೊಳ್ಳೇಗಾಲ: ವಿಶೇಷ ಘಟಕ ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಸುಮಾರು 30 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ತಾಲೂಕಿನ ಹೊಸಮಾಲಂಗಿ ಗ್ರಾಮದಲ್ಲಿ ಶಾಸಕ ಎನ್‌. ಮಹೇಶ್‌ ಭೂಮಿ ಪೂಜೆ ಸಲ್ಲಿಸಿದರು.

Advertisement

ಸರ್ಕಾರ ಎಸ್‌.ಸಿ.ಪಿ ಮತ್ತು ಟಿ.ಎಸ್‌.ಪಿ ಯೋಜನೆಯಡಿಯಲ್ಲಿ 30 ಲಕ್ಷ ರೂ. ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಕಾಂಕ್ರೀಟ್‌ ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಹಿಂದುಳಿದ ಸಮಾಜದ ಕಾಲೋನಿಗಳನ್ನು ಸ್ವತ್ಛವಾಗಿ ಹಿಡುವ ಸಲುವಾಗಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ಸಲ್ಲಿಸಿದ್ದ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಕಾಮಗಾರಿ ಮೇಲ್‌ಉಸ್ತುವಾರಿ ಮೂಲಕ ವೀಕ್ಷಣೆ ಮಾಡಿ ಗುಣಮಟ್ಟ ಕಾಪಾಡಬೇಕು ಎಂದರು.

ಅಧಿಕಾರಿಗಳಿಗೆ ಸೂಚನೆ: ಕಾಮಗಾರಿಗೆ ಕಾಲಮಿತಿಯನ್ನು ಲೋಕೋಪಯೋಗಿ ಇಲಾಖೆ ನೀಡಿದ್ದು ಅವಧಿಯೊಳಗೆ ಪೂರ್ಣಗೊಳಿಸಿ ಗ್ರಾಮಸ್ಥರ ಅನುಕೂಲಕ್ಕೆ ಕಲ್ಪಿಸಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಖಾತೆ ಮಾಡಿ ಕೊಡುವ ಭರವಸೆ: ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು 65 ಮನೆಗಳಿಗೆ ಖಾತೆಗಳು ಇಲ್ಲದೆ ತೊಂದರೆ ಪಡುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಮನೆಗಳ ಖಾತೆ ಮಾಡಿಕೊಡುವಂತೆ ಮನವಿ ಮಾಡಿದ್ದು, ಕೂಡಲೇ ತಹಶೀಲ್ದಾರ್‌ ಗಮನ ಸೆಳೆದು ಖಾತೆ ಮಾಡಿಸಿಕೊಡುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದರು.

ದಸರಾ ಆಚರಣೆ: ಪಟ್ಟಣದಲ್ಲಿ ಗ್ರಾಮೀಣ ದಸರಾ ಆಚರಣೆಯನ್ನು 4ರಂದು ಆಚರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಕಾರಣಾಂತರದಿಂದ 7ರಂದು ಆಚರಣೆ ಮಾಡಲಾಗುವುದು. ತಾಲೂಕಿನ ಸಮಸ್ತ ಪ್ರಗತಿಪರ ಸಂಘಟನೆಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

Advertisement

ಮುಖ್ಯಮಂತ್ರಿ ಹೇಳಿಕೆಗೆ ವ್ಯಂಗ್ಯ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರವರು ತಂತಿಯ ಮೇಲೆ ನಡೆದಂತೆ ಆಡಳಿತ ನಡೆಸಬೇಕಾಗಿದೆ ಎಂದು ಹೇಳಿದ್ದು, ಅದನ್ನು ಇತರೆ ಕೋನಗಳಲ್ಲಿ ಮಾಹಿತಿಗಳು ಬಂದಿದ್ದು, ಅವರು ಪ್ರವಾಹದ ಸಂದರ್ಭದಲ್ಲಿ ಅನುದಾನವನ್ನು ಸಮರ್ಪಕವಾಗಿ ವಿತರಣೆ ಮಾಡಲಾಗದೆ ಆಡಳಿತ ತಂತಿ ಮೇಲೆ ನಡೆದಂತೆ ಇದೆ ಎಂದು ಹೇಳಿದ್ದಾರೆ ಹೊರತು ಇದಕ್ಕೆ ಬೇರೆ ವ್ಯಾಖ್ಯಾನ ಇಲ್ಲ ಎಂದರು.

ಪರಿಹಾರ ವಿಳಂಬ: ರಾಜ್ಯದಲ್ಲಿ ಬಿಜೆಪಿಯ 25 ಸಂಸದರು ಯಾವಾಗ ಆಯ್ಕೆಯಾಗಿರಲಿಲ್ಲ. ಆದರೆ ಈ ಬಾರಿ ಆಯ್ಕೆಯಾಗಿದ್ದು, ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗಿ ರಾಜ್ಯದಲ್ಲಿ ಪ್ರವಾಹದಿಂದ ನೊಂದಿರುವ ಜನರಿಗೆ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ತಂದು ಕೊಡಬೇಕಾಗಿತ್ತು. ಅದನ್ನು ತರುವಲ್ಲಿ ಸಂಸದರ ವೈಫ‌ಲ್ಯದಿಂದಾಗಿ ಮುಖ್ಯಮಂತ್ರಿಗಳು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

ಪ್ರಸಾದ್‌ ನಡೆ ಗಟ್ಟಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರವರು ಬೆಂಗಳೂರಿನಲ್ಲಿ ಮೈಸೂರು ದಸರಾ ಆಚರಣೆಯ ಬಗ್ಗೆ ಕರೆದಿದ್ದ ಸಭೆಯಲ್ಲಿ ಅದ್ದೂರಿ ಆಚರಣೆ ಬೇಡ. ಸಂಪ್ರದಾಯ ದಸರಾ ಆಚರಣೆ ಮಾಡಬೇಕು. ಅದ್ದೂರಿಯಾಗಿ ನಡೆಸಿದ ಪಕ್ಷದಲ್ಲಿ ಆಚರಣೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದಂತೆ ಮೈಸೂರು ದಸರಾ ಉದ್ಘಾಟನೆಯಲ್ಲಿ ಪಾಲ್ಗೊಂಡಿಲ್ಲ ಅವರು ಹೇಳಿದಂತೆ ಮೈಸೂರು ದಸರಾ ಉದ್ಘಾಟನೆಯಲ್ಲೂ ಪಾಲ್ಗೊಂಡಿಲ್ಲ ಎಂದರು.

ಜಿಪಂ ಸದಸ್ಯ ನಾಗರಾಜು, ತಾಪಂ ಉಪಾಧ್ಯಕ್ಷೆ ಲತಾ, ಟಗರಪುರ ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ, ಮುಖಂಡರಾದ ಮೂರ್ತಿ, ಶಿವನಂಜಪ್ಪ, ಚಿನ್ನಸ್ವಾಮಿ, ಲೋಕೋಪಯೋಗಿ ಇಲಾಖೆಯ ಎಇಇ ಮಹದೇವಸ್ವಾಮಿ, ಸಹಾಯಕ ಎಂಜಿನಿಯರ್‌ ರಾಜು, ಗುತ್ತಿಗೆದಾರ ಮಹದೇವ ಪ್ರಸಾದ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next