Advertisement

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಿ

03:22 PM Jun 19, 2019 | Suhan S |

ಕಾರಟಗಿ: ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕೆಂದು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಪಟ್ಟಣದ ಜ್ಯೂನಿಯರ್‌ ಕಾಲೇಜ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮುಖ್ಯ ರಸ್ತೆಯಿಂದ ಸಾಗಿ ಕನಕದಾಸ ವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವಂತೆ ಘೋಷಣೆಗಳ ಮೂಲಕ ಆಗ್ರಹಿಸಿದರು.

ನಂತರ ಎಬಿವಿಪಿ ನಗರ ಕಾರ್ಯದರ್ಶಿ ಶಿವುಕುಮಾರ ಹಾಲಸಮುದ್ರ ಮಾತನಾಡಿ, ಶಿಕ್ಷಣವೆಂಬುದು ಸರ್ವರಿಗೂ ಸಿಗಬೇಕಾಗಿರುವ ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಕಲ್ಪನೆ ನಮ್ಮದು. ಜಾತಿ, ಮತ, ಬಡವ ಮತ್ತು ಶ್ರೀಮಂತರೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರಕಾರಗಳದ್ದು, ಆದರೆ 2018-19 ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರಕಾರ ಎಸ್‌.ಸಿ/ಎಸ್‌.ಟಿ. ಸೇರಿದಂತೆ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇಂದಿಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರಕಾರದ ನೀರ್ಲಕ್ಷ ಧೋರಣೆ ಎದ್ದು ಕಾಣುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸರಕಾರ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿ ಪರಿಷತ್‌ನ ಬೇಡಿಕೆಯನ್ನು ಮೂಲೆಗುಂಪು ಮಾಡದೆ ಮನ್ನಣೆ ನೀಡಬೇಕು. ಅಲ್ಲದೆ ಇಂಥ ದಿನಗಳಲ್ಲಿ ಹೆಚ್ಚಾಗಿ ಬಸ್‌ಪಾಸ್‌ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರೇ ಆಗಿದ್ದು ರಾಜ್ಯದ ಎಲ್ಲ ವರ್ಗದ ಎಲ್ಲ ಸ್ಥರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ಉಚಿತ ಬಸ್‌ ಪಾಸ್‌ ನೀಡಬೇಕು ಎಂದು ಆಗ್ರಹಿಸಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಕಚೇರಿ ಸ್ಥಾನಿಕ ಅಧಿಕಾರಿ ಸಾವಿತ್ರಿ ಬಾಯಿಯವರಿಗೆ ಮನವಿ ಸಲ್ಲಿಸಿದರು. ಮುತ್ತಣ್ಣ, ಪ್ರಶಾಂತ, ಮಲ್ಲಿಕಾರ್ಜುನ ಆಲಸಮುದ್ರ, ನಾಗರತ್ನ, ಯಮನಮ್ಮ, ರೇಣುಕಾ, ಗಂಗಮ್ಮ, ಗೌರಮ್ಮ, ರಾಜೇಶ್ವರಿ, ಸುಜಾತಾ, ಪೂರ್ಣಿಮಾ, ಚೈತ್ರಾ, ವೊಂಬುಜಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next