Advertisement

ಕೋವಿಡ್ ವರದಿ ಒಂದೇ ದಿನದಲ್ಲಿ ಕೊಡಿ

02:45 PM Aug 05, 2020 | Suhan S |

ಕಲಬುರಗಿ: ಕೋವಿಡ್‌ 19 ಸೋಂಕು ಪತ್ತೆಗಾಗಿ ತಪಾಸಣೆಯ ವೈದ್ಯಕೀಯ ಮಾದರಿ ವರದಿಯನ್ನು 24 ಗಂಟೆಯಲ್ಲಿ ಸಾರ್ವಜನಿಕರಿಗೆ ದೊರಕುವಂತಾಗಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ್‌ ಹೇಳಿದರು.

Advertisement

ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಕೋವಿಡ್‌ 19 ನಿಯಂತ್ರಣ ಮತ್ತು ಜಿಮ್ಸ್‌ ಆಸ್ಪತ್ರೆಗೆ ಮಂಡಳಿಯ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕೋವಿಡ್‌ ನಿಯಂತ್ರಿಸಲು ಸ್ಯಾಂಪಲ್‌ ನೀಡಿದ ವ್ಯಕ್ತಿಗೆ ತ್ವರಿತಗತಿಯಲ್ಲಿ ವೈದ್ಯಕೀಯ ವರದಿ ನೀಡುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಸ್ಯಾಂಪಲ್‌ ಪಡೆದು ವಾರಗಟ್ಟಲೆಯಾದರೂ ವರದಿ ಬಾರದಿದ್ದಲ್ಲಿ ಜನರು ಅನಗತ್ಯ ಗೊಂದಲಕ್ಕೆ ಈಡಾಗುತ್ತಾರೆ. ಇದಕ್ಕೆ ಅವಕಾಶ ನೀಡಬಾರದು. ಸ್ಯಾಂಪಲ್ಸ್‌ ಹೆಚ್ಚು ಸಂಗ್ರಹಗೊಂಡಲ್ಲಿ ಬೆಂಗಳೂರು ಅಥವಾ ಪುಣೆಗೆ ಕಳುಹಿಸಿ 24 ಗಂಟೆಯಲ್ಲಿ ವೈದ್ಯಕೀಯ ವರದಿಯನ್ನು ಸಂಬಂ ಧಿಸಿದ ವ್ಯಕ್ತಿಗಳಿಗೆ ತಿಳಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.

ಕೋವಿಡ್‌ ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ರೋಗಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ, ಅಂಬ್ಯುಲೆನ್ಸ್‌ ಸೇವೆ, ಹಾಸಿಗೆ ಲಭ್ಯತೆ, ಊಟೋಪಚಾರ ಸರಿಯಾಗಿ ತಲುಪುತ್ತಿಲ್ಲ ಎಂಬ ಆರೋಪ ಬರುತ್ತಿದ್ದು, ತಕ್ಷಣವೇ ವೈದ್ಯೋಪಚಾರ ಗುಣಮಟ್ಟವನ್ನು ಹೆಚ್ಚಿಸಬೇಕು. ಜನರಲ್ಲಿ ಕೊರೊನಾ ರೋಗಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ವಿಶ್ವಾಸ ಬರಲು ವಿನೂತನ ಪ್ರಯತ್ನಗಳು ಆಗಬೇಕಿದೆ ಎಂದರು.

ಮುಂದಿನ ದಿನದಲ್ಲಿ ಕನಿಷ್ಠ ಅರ್ಧ ಗಂಟೆಗೊಮ್ಮೆ ವೈದ್ಯ ಅಥವಾ ನರ್ಸ್‌ಗಳು ರೋಗಿಯನ್ನು ವೈಯಕ್ತಿಕವಾಗಿ ವಿಚಾರಿಸಿದಲ್ಲಿ ರೋಗಿಯಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಬೇಗ ಗುಣಮುಖನಾಗಲು ಸಾಧ್ಯ. ಜಿಮ್ಸ್‌ಗೆ ಬರುವ ಯಾವುದೇ ರೋಗಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿಲ್ಲದಿದ್ದಲ್ಲಿ ಬೇರೆ ಆಸ್ಪತ್ರೆಯಲ್ಲಿ ರೋಗಿ ಪ್ರವೇಶ ಪಡೆಯಲು ಅಗತ್ಯ ಕ್ರಮ ವಹಿಸಬೇಕು. ಕೋವಿಡ್‌ 19 ನಿಯಂತ್ರಣಕ್ಕೆ ಮಂಡಳಿಯಿಂದ ನೀಡಬೇಕಾದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಅನುದಾನ ಬಳಕೆ ಮಾಡಿಕೊಳ್ಳಿ: ಜಿಮ್ಸ್‌ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ನೀರು ಪೂರೈಸಲೆಂದೇ 2.77 ಕೋಟಿ ರೂ. ಮೊತ್ತಕ್ಕೆ ಮಾ.2ರಂದೇ ಅನುಮೋದನೆ ಸಿಕ್ಕಿದೆ. ಇದೂವರೆಗೆ ಕಾಮಗಾರಿ ಆರಂಭಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಕೂಡಲೇ ಕಾಮಗಾರಿ ಕೈಗೆತ್ತಿಕೊಲುÛವಂತೆ ಮತ್ತು ಮಂಡಳಿ ಅನುದಾನ ಸದುಪಯೋಗ ಮಾಡಿಕೊಳ್ಳುವಂತೆ ಜಿಮ್ಸ್‌ ನಿರ್ದೇಶಕರಿಗೆ ಸೂಚಿಸಿದರು.

Advertisement

ಜಿಮ್ಸ್‌ ನಿರ್ದೇಶಕಿ ಡಾಣ ಕವಿತಾ ಪಾಟೀಲ ಮಾತನಾಡಿ, ಜಿಮ್ಸ್‌ ಆಸ್ಪತ್ರೆ ಮತ್ತು ಐಸೋಲೇಷನ್‌ ವಾರ್ಡ್‌ನಲ್ಲಿ ರೋಗಿಗಳಿಗೆಸರಿಯಾದ ಸಮಯಕ್ಕೆ ಊಟ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ನೆಲ ಮಹಡಿಯಲ್ಲಿ ಸ್ಕ್ರೀನಿಂಗ್‌ ಮಾಡಲಾಗುತ್ತಿದ್ದು, ಇದಕ್ಕಾಗಿ ಎರಡು ಹಾಸಿಗೆಗಳನ್ನು ವೆಂಟಿಲೇಟರ್‌ ಸಮೇತ ಇಡಲಾಗಿದೆ ಎಂದರು.

ಡಿಎಚ್‌ಒ ಡಾಣ ರಾಜಶೇಖರ್‌ ಮಾಲಿ ಮಾತನಾಡಿದರು. ಸಭೆಯಲ್ಲಿ ಕೆಕೆಆರ್‌ ಡಿಬಿ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತ ಡಾಣ ಎನ್‌.ವಿ.ಪ್ರಸಾದ, ಜಿಪಂ ಸಿಇಒ ಡಾಣ ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಜಿಮ್ಸ್‌ ಆಡಳಿತ ಮಂಡಳಿ ಸದಸ್ಯರಾದ ಧನಂಜಯ ಕುರಿ, ಪ್ರಹ್ಲಾದ ಪೂಜಾರಿ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾಣ ಶಿವಾನಂದ ಸುರಗಾಳಿ, ಜಿಲ್ಲಾಸ್ಪತ್ರೆಯ ಸರ್ಜನ್‌ ಡಾಣ ಅಂಬಾರಾಯ ರುದ್ರವಾಡಿ, ಜಿಮ್ಸ್‌ ವೈದ್ಯಕೀಯ ಅಧಿಧೀಕ್ಷಕ ಡಾಣ ಶಫಿಯುದ್ದಿನ್‌, ಡಾಣ ಸಂದೀಪ್‌, ಸಹಾಯಕ ಆಡಳಿತಾಧಿಕಾರಿ ಪಾರ್ವತಿ ಸೇರಿದಂತೆ ಇಎಸ್‌ಐಸಿ ಮತ್ತು ಜಿಮ್ಸ್‌ ಆಸ್ಪತ್ರೆಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next