Advertisement

ಯೋಜನೆಗಳ ಮಾಹಿತಿ ನೀಡಿ: ಡಿಸಿ

02:52 PM Apr 06, 2017 | Team Udayavani |

ಉಡುಪಿ: ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳು ಕೈಗೊಳ್ಳುವ ಕಾರ್ಯಕ್ರಮಗಳ ಕುರಿತು ವ್ಯಾಪಕವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ನಡೆದ ಪ.ಜಾತಿ ಉಪಯೋಜನೆ, ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಸಭೆಯಲ್ಲಿ ಮಾಹಿತಿ ನೀಡಿ ಎಲ್ಲ ಇಲಾಖೆಗಳು ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪತ್ರವನ್ನು ಆ ಸಮುದಾಯದವರು ವಾಸ ಮಾಡುವ ಪ್ರದೇಶದಲ್ಲಿ ವಿತರಿಸಬೇಕು. ಗ್ರಾಮಸಭೆಗಳಲ್ಲಿ ಯೋಜನೆಗಳ ಮಾಹಿತಿ ನೀಡುವಂತೆ ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ಹೋಬಳಿ ಮಟ್ಟದಲ್ಲೂ ಸಹ ಮಾಹಿತಿ ಕಾರ್ಯಕ್ರಮ ಏರ್ಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ಕ್ರಿಯಾಯೋಜನೆ ಸಿದ್ಧಪಡಿಸಿ
ಯೋಜನೆಯಲ್ಲಿ ನಿಗದಿಪಡಿಸಿದ ಸಂಪೂರ್ಣ ಅನುದಾನವನ್ನು ನಿಗದಿತ ಅವಧಿಯಲ್ಲಿಯೇ ವೆಚ್ಚ ಮಾಡಿ, ಫ‌ಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಬೇಕು. ಎಲ್ಲ ಇಲಾಖೆಗಳು ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ 2017-18ರಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಡಿಸಿ ಸೂಚಿಸಿದರು. 

ಪ್ರತಿ ತಿಂಗಳ 15ನೇ ತಾರೀಕಿನಂದು ಎಸ್‌.ಸಿ.ಪಿ., ಟಿ.ಎಸ್‌.ಪಿ. ಸಭೆ ನಡೆಯಲಿದ್ದು, ಪೂರ್ವಾನುಮತಿ ಪಡೆಯದೇ ಸಭೆಗೆ  ಹಾಜರಾಗದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ತಿಳಿಸಿದರು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ್‌ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next