Advertisement

4 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡಿ

06:00 AM Jul 01, 2018 | Team Udayavani |

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಕನಿಷ್ಠ ಮೂರು ಅಥವಾ ನಾಲ್ಕು ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವಂತೆ ಹೈಕಮಾಂಡ್‌ಗೆ ಮನವಿ ಸಲ್ಲಿಸಲಿದ್ದೇವೆ ಎಂದು ಕಾಂಗ್ರೆಸ್‌ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಹಿಳಾ ಕಾಂಗ್ರೆಸ್‌ ರಾಜ್ಯ ಕಾರ್ಯಕಾರಿಣಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ 3 ಅಥವಾ 4 ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡ 
ಬೇಕು. ಹಳ್ಳಿಯಿಂದ ದೆಹಲಿಗೆ ಮಹಿಳೆ ಮುಜುಗರ ಇಲ್ಲದೇ ಸಾಗಬೇಕು. ರಾಜ್ಯ ಸಂಪುಟ ವಿಸ್ತರಣೆಯಲ್ಲಿ ಮತ್ತೂಂದು ಸಚಿವ ಸ್ಥಾನ ಮಹಿಳೆಗೆ ನೀಡಬೇಕೆಂದು ನಿರ್ಣಯ ಕೈಗೊಂಡಿದ್ದೇವೆ. ಇದನ್ನು ಪಕ್ಷದ ನಾಯಕರ ಗಮನಕ್ಕೆ ತರಲಾಗುವುದು ಎಂದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಸಿದ್ದೇವೆ. ಪಕ್ಷ ಸಂಘಟನೆಯನ್ನು ಚುರುಕುಗೊಳಿಸುವ,ಬೂತ್‌ ಮಟ್ಟದಲ್ಲಿ ಪಕ್ಷ ಬಲವರ್ಧನೆಯ ಕಾರ್ಯಕ್ರಮಗಳ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳಲ್ಲೂ ಮಹಿಳೆಯರಿಗೆ ಇನ್ನಷ್ಟು ಆದ್ಯತೆ
ಸಿಗಬೇಕು. ಮಹಿಳೆಯರು ಸಮರ್ಥವಾಗಿ ಕುಟುಂಬ ನಿರ್ವಹಣೆ ಮಾಡುವ ಜತೆಗೆ ರಾಜಕೀಯದಲ್ಲೂ ಸಕ್ರಿಯರಾಗಿದ್ದು, ಡಬಲ್‌ ರೋಲ್‌ ನಿಭಾಯಿಸುತ್ತಾರೆ. ರಾಜಕೀಯದಲ್ಲಿರುವ ಮಹಿಳೆಯರಿಗೆ ಹೆಚ್ಚಿನ ಅವಕಾಶ ದೊರೆಯಬೇಕು. ಸಂಪುಟದಲ್ಲಿ ಒಂದು ಸ್ಥಾನ ಮಾತ್ರ ಮಹಿಳೆಯರಿಗೆ ನೀಡಲಾಗಿದೆ. ಇನ್ನೊಂದು ಸಚಿವ ಸ್ಥಾನವನ್ನು ಹೆಬ್ಟಾಳ್ಕರ್‌ಗೆ ನೀಡಬೇಕೆಂದು ಆಗ್ರಹಿಸಿದರು.

ಮಹತ್ವಾಕಾಂಕ್ಷೆಯ ಪಾŠಜೆಕ್ಟ್ ಶಕ್ತಿಗೆ ಚಾಲನೆ ಅಖೀಲ ಭಾರತ ಮಹಿಳಾ ಕಾಂಗ್ರೆಸ್‌ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ಆದೇಶದಂತೆ “ಪ್ರಾಜೆಕ್ಟ್ ಶಕ್ತಿ’ ಸಾಮಾಜಿಕ ಜಾಲತಾಣದ ವೇದಿಕೆಗೆ ಚಾಲನೆ ನೀಡಿದ್ದೇವೆ
ಎಂದು ಲಕ್ಷ್ಮೀ ಹೆಬ್ಟಾಳ್ಕರ್‌ ಹೇಳಿದರು.

Advertisement

ಇದರಡಿ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರಿಗೆ ವಾಟ್ಸ್‌ಅಪ್‌ ಸಂಖ್ಯೆ ನೀಡಲಾಗಿದೆ. ಭಾರತದಾದ್ಯಂತ ಎಲ್ಲ ಮಹಿಳಾ ಕಾರ್ಯಕರ್ತೆಯರು ಈ ಸಂಖ್ಯೆಯಲ್ಲಿ ಸಂಪರ್ಕಕ್ಕೆ ಬರಲಿದ್ದಾರೆ. ಈ ವಾಟ್ಸ್‌ಅಪ್‌ ಸಂಖ್ಯೆ ಮೂಲಕ ರಾಹುಲ್‌ ಗಾಂಧಿ ಅವರನ್ನು ಸಂಪರ್ಕಿಸಬಹುದು. ಭವಿಷ್ಯದಲ್ಲಿ ಬೂತ್‌ ಮಟ್ಟದ ಕಾರ್ಯಕರ್ತರ ಜತೆ ನೇರ ಸಂಪರ್ಕದಲ್ಲಿರಲು ನೆರವಾಗಲಿದ್ದು ಈ ಮೂಲಕ ಮಹಿಳಾ ಕಾಂಗ್ರೆಸ್‌ ಇನ್ನಷ್ಟು ಬಲವರ್ಧನೆಯಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next