Advertisement

ಬಸ್‌ ನಿಲ್ದಾಣಗಳಲ್ಲಿ ನೀರು ಕೊಡಿ

03:59 PM Apr 11, 2017 | Team Udayavani |

ಕಲಬುರಗಿ: ಈಗ ಕಡು ಬೇಸಿಗೆ ಕಾಲವಾಗಿದ್ದರಿಂದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ವ್ಯಾಪ್ತಿಯ ಎಲ್ಲ ಬಸ್‌ ನಿಲ್ದಾಣಗಳಲ್ಲೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಸ್ವತ್ಛತೆ, ಶೌಚಾಲಯಗಳ ಸುಸ್ಥಿತಿ ಬಗ್ಗೆ ಪ್ರತಿದಿನವೂ ಗಮನಹರಿಸುವಂತೆ ಸಂಸ್ಥೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣ ಪ್ರಕಾಶ ಪಾಟೀಲ ಸೂಚಿಸಿದರು.

Advertisement

ನಗರದಲ್ಲಿ ನಡೆದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಗತಿ ಪರಿಶೀಲನಾ  ಸಭೆಯಲ್ಲಿ ಅವರು ಮಾತನಾಡಿದರು. ಸಂಸ್ಥೆ ಕಾರ್ಯಾಚರಣೆ ಉತ್ತಮಗೊಳಿಸುವ ಬಗ್ಗೆ ಹಾಗೂ ಲಾಭದತ್ತ ತೆಗೆದುಕೊಂಡು ಹೋಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದ ಅವರು, ಪ್ರಯಾಣಿಕರಿಗೆ ಒದಗಿಸಬೇಕಾದ ಮೂಲಭೂತ ಸೌಲಭ್ಯಗಳ ಬಗೆ ಚರ್ಚಿಸಿದರು. 

ಅನಧಿಕೃತ ವಾಹನಗಳ ಕಾರ್ಯಾಚರಣೆಗಳಿಂದ ಸಂಸ್ಥೆಗೆ ಆಗುತ್ತಿರುವ ನಷ್ಟದ ಬಗ್ಗೆ ಸಂಸ್ಥೆ ಅಧ್ಯಕ್ಷ ಮಹಮ್ಮದ್‌ ಇಲಿಯಾಸ್‌ ಸೇಠ ಬಾಗಬಾನ್‌ ಗಮನಕ್ಕೆ ತಂದಾಗ ಸಚಿವರು ಖಾಸಗಿ ವಾಹನಗಳ ನಿಯಂತ್ರಣಕ್ಕಾಗಿ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. 

ಸರಕಾರ ಸಂಸ್ಥೆಗೆ ನೀಡಬೇಕಾಗಿರುವ ಬಾಕಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಸಚಿವರು ತಮ್ಮನ್ನು ಭೇಟಿಯಾದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಬೇಡಿಕೆಗಳ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ಇದಲ್ಲದೆ 371ನೇ(ಜೆ) ಅಡಿ ನೀಡಬೇಕಾದ ಪದೋನ್ನತಿಗಳ ಬಗ್ಗೆ ವಿವರವಾದ ವರದಿ ನೀಡುವಂತೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು. ನಂತರ ಸಚಿವರು, ಸಂಸ್ಥೆ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ನಗರದ ಸೂಪರ್‌ ಮಾರ್ಕೆಟ್‌ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿ ಹೊಸ ಹೈಟೆಕ್‌ ಮಾದರಿ ಬಸ್‌ ನಿಲ್ದಾಣ ನಿರ್ಮಿಸಲು ಉಂಟಾಗಿದ್ದ ತಾಂತ್ರಿಕ ತೊಂದರೆಗಳ ಬಗ್ಗೆ ಪರಿಶೀಲಿಸಿದರು. 

Advertisement

ಈ ಕುರಿತು ಸೂಕ್ತ ನಿರ್ದೇಶನ ನೀಡಿ ಆದಷ್ಟು ಬೇಗ ಬಸ್‌ ನಿಲ್ದಾಣದ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು. ವ್ಯವಸ್ಥಾಪಕ ನಿರ್ದೇಶಕ ಎಚ್‌.ಎಸ್‌. ಅಶೋಕಾನಂದ ಹಾಗೂ ಸಂಸ್ಥೆ ಹಿರಿಯ ಅಧಿಕಾರಿಗಳು ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next