Advertisement
ಅರಣ್ಯ ಇಲಾಖೆಯ ಕೆನರಾ ವೃತ್ತ ಹಾಗೂ ಕಾರವಾರ ಅರಣ್ಯ ವಲಯದಿಂದ ತಾಲೂಕಿನ ಕೊಡಿಭಾಗದ ಕಾಳಿಮಾತಾ ನಡುಗಡ್ಡೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಕಾಂಡ್ಲಾ ನಡಿಗೆ’ ಪಥದ ಉದ್ಘಾಟನೆ ಹಾಗೂ ಅರಣ್ಯದಂಚಿನ ಗ್ರಾಮಸ್ಥರಿಗೆ ಅಡುಗೆ ಅನಿಲ ವಿತರಣೆ ಮತ್ತು ಮೀನುಗಾರರಿಗೆ ಬಲೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಅರಣ್ಯ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮವಾಗಿ ವರ್ತಿಸಬೇಕು. ಸಾರ್ವಜನಿಕರ ಸಹಕಾರದೊಂದಿಗೆ ಇಂತಹ ಕಾರ್ಯಗಳಿಗೆ ಮುಂದಾದರೆ ಯೋಜನೆಗಳು ಯಶಸ್ವಿಯಾಗುತ್ತವೆ ಎಂದರು.
ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಡ್ಲಾ ಸಸ್ಯಗಳಿರುವ ಪ್ರದೇಶಗಳಲ್ಲಿ ಕಾಳಿಮಾತಾ ನಡುಗಡ್ಡೆಯೂ ಒಂದಾಗಿದೆ. ಈ ನಡುಗಡ್ಡಯಲ್ಲಿ ಕಾಂಡ್ಲಾ ನಡಿಗೆ ಪಥ ನಿರ್ಮಿಸಲು ಕಳೆದ ಒಂದು ವರ್ಷದಿಂದ ನಿರಂತರವಾಗಿ ಶ್ರಮಿಸಲಾಗಿದೆ. ಪರಿಸರದಲ್ಲಿ ಕಾಂಡ್ಲಾ ಅಳಿವೆಗಳು ಅತ್ಯಂತ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದು, ನದಿಗಳು ಮತ್ತು ಸಮುದ್ರ ಒಟ್ಟಿಗೆ ಸೇರುವಂತ ಪ್ರದೇಶದಲ್ಲಿ ಮಾತ್ರ ಕಂಡುಬರುತ್ತವೆ. ಒಟ್ಟಾರೆಯಾಗಿ ೩೨೦೦ ಹೆಕ್ಟರ್ ಪ್ರದೇಶವಿದ್ದು, ೨೪೦ ಮೀಟರ್ ಉದ್ದದ ಕಾಂಡ್ಲಾ ನಡಿಗೆ ಪಥ ನಿರ್ಮಿಸಲಾಗಿದೆ. ಪರಿಸರ ಪ್ರವಾಸೋದ್ಯಮ ಯೋಜನೆಯಡಿ ಇದರ ನಿರ್ವಹಣೆ ನಡೆಯಲಿದೆ. ಉತ್ತಮ ಪ್ರವಾಸಿ ತಾಣ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ನಾಗರಿಕರೂ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ನಗರ ಸಭೆ ಅಧ್ಯಕ್ಷ ನಿತಿನ್ ಪಿಕಳೆ ಮಾತನಾಡಿ, ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಹಾಗೂ ವಿಜ್ಞಾನಿಗಳಿಗೆ ಅಧ್ಯಯನ ಮಾಡಲು ಕಾಳಿಮಾತಾ ನಡುಗಡ್ಡೆ ಉತ್ತಮ ಪ್ರದೇಶ ಹಾಗೂ ಪ್ರವಾಸಿತಾಣವಾಗಿದೆ.ಸರಕಾರದಿಂದ ಸಿಗುವಂತ ಅಡುಗೆ ಅನಿಲ ಉಪಯೋಗಿಸುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಿದೆ ಎಂದರು.
ಕಾಳಿಮಾತಾ ಮಂದಿರದ ಧರ್ಮಾಧಿಕಾರಿ ವಿಷ್ಣು ಸಾವಂತ ಬೋಸ್ಲೆ ಸ್ವಾಮೀಜಿ, ನಗರಸಭೆಯ ಉಪಾಧ್ಯಕ್ಷ ಪ್ರಕಾಶ ಪಿ. ನಾಯ್ಕ್, ಕಾರವಾರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ ಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯದಂಚಿನ ಗ್ರಾಮಸ್ಥರಿಗೆ ಕೊಡಮಾಡುವ ಅಡುಗೆ ಅನಿಲ ಹಾಗೂ ಮೀನುಗಾರರಿಗೆ ಬಲೆಯನ್ನು ಶಾಸಕಿ ರೂಪಾಲಿ ನಾಯ್ಕ್ ವಿತರಣೆ ಮಾಡಿದರು.