Advertisement
ರವಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ದರ ಏರಿಕೆ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುತ್ತೇವೆಂದು ಹೇಳಿ, ಅದರ ವೆಚ್ಚ ಭರಿಸಲು ಬೆಲೆ ಏರಿಕೆ ಮಾಡುತ್ತಿರುವ ಈ ಪಕ್ಷಕ್ಕೆ ಜನ ಕೂತಲ್ಲಿ, ನಿಂತಲ್ಲಿ ಛೀಮಾರಿ ಹಾಕುತ್ತಿದ್ದಾರೆ ಎಂದರು.
ಬಸ್ ದರ ಏರಿಕೆ ವಿರುದ್ಧ ಬಿಜೆಪಿ ಈಗಾಗಲೇ ಹೋರಾಟ ನಡೆಸುತ್ತಿದೆ. ಈ ಸರ್ಕಾರಕ್ಕೆ ಗೊತ್ತು-ಗುರಿ ಇಲ್ಲ. ಸರ್ಕಾರ ಸತ್ತು ಹೋಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳ ಹಿಂಪಡೆದಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಹಿಂಪಡೆಯುವ ಮುನ್ಸೂಚನೆ ನೀಡುತ್ತಿದೆ. ಈ ಕಡೆ ಕೊಟ್ಟಂತೆ ಮಾಡಿ ಮತ್ತೊಂದೆಡೆ ಭಾರ ಹೇರುತ್ತಿದೆ. ಇದು ಜನವಿರೋಧಿ ಸರ್ಕಾರ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.