Advertisement

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

11:00 PM Jan 05, 2025 | Team Udayavani |

ಬೆಂಗಳೂರು:  ಕಾಂಗ್ರೆಸ್‌ ಸರ್ಕಾರ ಬಸ್‌ ದರವನ್ನು ಮನಸೋ ಇಚ್ಛೆ ಏರಿಕೆ ಮಾಡಿ ಜನರಿಗೆ ಬರೆ ಎಳೆದಿದೆ. ಇದನ್ನು ನಾನು ಖಂಡಿಸುತ್ತೇನೆ. ಮಹಿಳೆಯರಿಗೆ ಉಚಿತವಾಗಿ ಕೊಟ್ಟು ಅದರ ಭಾರವನ್ನು ಪುರುಷರ ಮೇಲೆ ಹೇರುವುದು ಸರಿಯಲ್ಲ. ತಕ್ಷಣ ದರ ಏರಿಕೆ ವಾಪಸ್‌ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದರು.

Advertisement

ರವಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ದರ ಏರಿಕೆ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನೀಡುತ್ತೇವೆಂದು ಹೇಳಿ, ಅದರ ವೆಚ್ಚ ಭರಿಸಲು ಬೆಲೆ ಏರಿಕೆ ಮಾಡುತ್ತಿರುವ ಈ ಪಕ್ಷಕ್ಕೆ ಜನ ಕೂತಲ್ಲಿ, ನಿಂತಲ್ಲಿ ಛೀಮಾರಿ ಹಾಕುತ್ತಿದ್ದಾರೆ ಎಂದರು.

ಅಧಿಕಾರದ ಮದ, ದರ್ಪದಿಂದ ನಡೆಯುತ್ತಿರುವ ಈ ಸರ್ಕಾರಕ್ಕೆ ಕನಿಷ್ಠ ಪ್ರಜ್ಞೆ, ಸಂವೇದನೆ ಇಲ್ಲ. ಈ ಸರ್ಕಾರ ಹೇಳಿದ್ದನ್ನು ಕೇಳಿಸಿಕೊಂಡು, ಮಾಡಿದ್ದನ್ನು ನೋಡಿಕೊಂಡು ಇರಲು ಸಾಧ್ಯವಿಲ್ಲ. ಅನ್ಯಾಯದ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನಮ್ಮ ಸಂವಿಧಾನವೇ ನಮಗೆ ಕೊಟ್ಟಿದೆ ಎಂದು ಎಚ್ಚರಿಕೆ ನೀಡಿದರು.

ಗೊತ್ತು-ಗುರಿ ಇಲ್ಲದ ಸರ್ಕಾರ: ಎಂಪಿಆರ್‌
ಬಸ್‌ ದರ ಏರಿಕೆ ವಿರುದ್ಧ ಬಿಜೆಪಿ ಈಗಾಗಲೇ ಹೋರಾಟ ನಡೆಸುತ್ತಿದೆ. ಈ ಸರ್ಕಾರಕ್ಕೆ ಗೊತ್ತು-ಗುರಿ ಇಲ್ಲ. ಸರ್ಕಾರ ಸತ್ತು ಹೋಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳ ಹಿಂಪಡೆದಿರುವ ಕಾಂಗ್ರೆಸ್‌, ಕರ್ನಾಟಕದಲ್ಲೂ ಹಿಂಪಡೆಯುವ ಮುನ್ಸೂಚನೆ ನೀಡುತ್ತಿದೆ. ಈ ಕಡೆ ಕೊಟ್ಟಂತೆ ಮಾಡಿ ಮತ್ತೊಂದೆಡೆ ಭಾರ ಹೇರುತ್ತಿದೆ. ಇದು ಜನವಿರೋಧಿ ಸರ್ಕಾರ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next