Advertisement

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜು ಪುಡಿ

12:35 PM Apr 16, 2018 | Team Udayavani |

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಪುಡಿ ಮಾಡಿರುವ ಘಟನೆ ಡಿ.ಜಿ.ಹಳ್ಳಿ ಕಾವಲ್‌ ಬೈರಸಂದ್ರದ ಮೋದಿ ಗಾರ್ಡ್‌ನ್‌ನಲ್ಲಿ ಶನವಾರ ತಡರಾತ್ರಿ ನಡೆದಿದೆ.

Advertisement

ತಡರಾತ್ರಿ 11 ಗಂಟೆ ಸುಮಾರಿಗೆ ನಾಲ್ಕೈದು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ ಆಟೋ, ಕಾರು ಹಾಗೂ ಟೆಂಪೋಗಳ ಗಾಜುಗಳನ್ನು ಮಾರಕಾಸ್ತ್ರಗಳಿಂದ ಪುಡಿ ಮಾಡಿದ್ದಾರೆ. ಆರೋಪಿಗಳ ದೌರ್ಜನ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯದ ಬಗ್ಗೆ ಸ್ಥಳೀಯರೊಬ್ಬರು ಆರೋಪಿಗಳನ್ನು ಪ್ರಶ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳೀಯರು ಪೊಲೀಸ್‌ ಸಹಾಯವಾಣಿ “ನಮ್ಮ-100’ಕ್ಕೆ ಕರೆ ಮಾಡಿ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನಾಧಿರಿಸಿ ಪೊಲೀಸರು ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾವಲ್‌ ಬೈರಸಂದ್ರದ ಮೋದಿ ಗಾರ್ಡ್‌ನ್‌ನಲ್ಲಿ ಎರಡು ಪುಂಡರ ಗುಂಪುಗಳಿದ್ದು, ಈ ಹಿಂದೆಯೂ ನಾಲ್ಕೈದು ಬಾರಿ ಇದೇ ರೀತಿ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಸಾರ್ವಜನಿಕರ ಮೇಲೂ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next