Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಎರಡು ಮನೆಗಳ ಹಸ್ತಾಂತರ

04:55 PM Jun 19, 2019 | Team Udayavani |

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖೀ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿದೆ. ಅದಕ್ಕೆ ಎಲ್ಲರ ಪ್ರೋತ್ಸಾಹ, ಸಹಕಾರವೂ ಬೇಕಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ತಿಳಿಸಿದರು.

Advertisement

ಬಂಟರ ಸಂಘ ಸುರತ್ಕಲ್‌ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಕಾರದಲ್ಲಿ ಚೇಳಾÂರ್‌ ಖಂಡಿಗೆ ಮತ್ತು ಬಾಳ ಒಟ್ಟೆಕಾಯರ್‌ನಲ್ಲಿ ನಿರ್ಮಿಸಿದ ಎರಡು ಮನೆಗಳಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿ, ಸಮಾಜ ದಲ್ಲಿ ಬಡವರನ್ನು ಗುರುತಿಸಿ ವಿದ್ಯಾ ಭ್ಯಾಸಕ್ಕೆ, ವೈದ್ಯಕೀಯಕ್ಕೆ ಹಾಗೂ ಮನೆ ನಿರ್ಮಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೇ ಬಡವರಿಗೆ ಮನೆಯನ್ನು ನಿರ್ಮಿಸಿಕೊಡುವ ಕೆಲಸ ಕಾರ್ಯಗಳೂ ನಡೆದಿದೆ ಎಂದು ಅವರು, ಬೇರೆ ಬೇರೆ ಬಂಟರ ಸಂಘಗಳಿಂದ ಬರುತ್ತಿರುವ ಅರ್ಜಿಗಳನ್ನು ಪರಿಶೀಲಿಸಿ ನೆರವು ನೀಡಲಾಗುತ್ತಿದೆ ಎಂದು ಐಕಳ ಹರೀಶ್‌ ಶೆಟ್ಟಿ ತಿಳಿಸಿದರು.

ಚೇಳಾÂರ್‌ ಖಂಡಿಗೆ ನಿವಾಸಿ ಹರೀಶ್‌ ಶೆಟ್ಟಿ ಮತ್ತು ಬಾಳ ಒಟ್ಟೆಕಾಯರ್‌ ನಿವಾಸಿ ವಿಜಯಲಕ್ಷ್ಮೀ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾದ ಮನೆಯನ್ನು ಹಸ್ತಾಂತರಿಸಲಾಯಿತು. ಮನೆಯ ಕೀ ಯನ್ನು ಸುರತ್ಕಲ್‌ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಕಳ ಹರೀಶ್‌ ಶೆಟ್ಟಿ ಅವರು ನೀಡಿದರು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಗೌರವ ಕೋಶಾಧಿಕಾರಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುರತ್ಕಲ್‌ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್‌. ಪೂಂಜಾ ಹೊಸಬೆಟ್ಟು,

ಉಪಾಧ್ಯಕ್ಷ ನವೀನ್‌ ಶೆಟ್ಟಿ ಪಡ್ರೆ, ಕಾರ್ಯದಶಿ ಲೋಕಯ್ಯ ಶೆಟ್ಟಿ ಮುಂಚೂರು, ಮಾಜಿ ಅಧ್ಯಕ್ಷ ಎಂ. ದೇವಾನಂದ ಶೆಟ್ಟಿ, ಉಲ್ಲಾಸ್‌ ಶೆಟ್ಟಿ ಪೆರ್ಮುದೆ, ಖಂಡಿಗೆಬೀಡು ಆದಿತ್ಯ ಮುಕಾಲ್ದಿ, ಬಂಟರ ಸಂಘದ ಪದಾಧಿಕಾರಿಗಳಾದ ಪುಷ್ಪರಾಜ್‌ ಶೆಟ್ಟಿ ಕುಡುಂಬೂರು, ಸುಧಾಕರ ಶೆಟ್ಟಿ ಚೇಳಾÂರು, ಪ್ರವೀಣ್‌ ಶೆಟ್ಟಿ , ರತ್ನಾಕರ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಬೇಬಿ ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಜೆ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next