Advertisement

Gnanavapi: ವಿಚಾರಣೆ ಮುಂದೂಡಿಕೆ

12:24 AM Dec 06, 2023 | Team Udayavani |

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೇವಾಲಯವನ್ನು ಪುನರ್‌ ಸ್ಥಾಪಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣಾಯೋಗ್ಯತೆಯನ್ನು ಪ್ರಶ್ನಿಸಿ ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಮಿತಿ(ಎಐಎಂಸಿ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್‌ ಹೈಕೋರ್ಟ್‌ ಮಂಗಳವಾರ ಮುಂದೂಡಿತು. ವಿಚಾರಣೆಗಾಗಿ ಈ ಅರ್ಜಿಯನ್ನು ನ್ಯಾಯಮೂರ್ತಿ ರೋಹಿತ್‌ ರಂಜನ್‌ ಅಗರ್ವಾಲ್‌ ಅವರಿದ್ದ ನ್ಯಾಯಪೀಠದ ಎದುರು ಪಟ್ಟಿ ಮಾಡಲಾಗಿತ್ತು.

Advertisement

ವಿಚಾರಣೆಯನ್ನು ನ್ಯಾಯಪೀಠ ಡಿ. 7ಕ್ಕೆ ಮುಂದೂಡಿದೆ. ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ವಾರಾಣಸಿ ನ್ಯಾಯಾಲಯ ನೀಡಿರುವ ನಿರ್ದೇಶನವನ್ನೂ ಕೂಡ ಈ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ ಎಂದು ಎಐಎಂಸಿ ಪರ ವಕೀಲರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next