Advertisement

ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

12:48 PM Dec 28, 2020 | keerthan |

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿ ಪರಿಷತ್ ನಲ್ಲಿ ಅವಕಾಶ ಸಿಗದ ಕಾರಣ ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ನಡೆದ ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.

Advertisement

ಈ ಬಗ್ಗೆ ಮಾತನಾಡಿದ ಸಚಿವ ಪ್ರಭು ಚೌಹಾಣ್, ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನೀಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 2010 ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ.  ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು ಆದರೆ 2020ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ 13 ವರ್ಷದ ಎಮ್ಮೆ/ಕೋಣಗಳಿಗೆ ನಿರ್ಬಂಧ ವಿರುತ್ತದೆ.  ಹಾಗಾಗಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಇದ್ದ ಆಕ್ಷೇಪಣೆ ಇಲ್ಲಿ ಪರಿಗಣನೆಗೆ ತೆಗೆದುಕೊಂಡು ಮಸೂದೆ ರೂಪಿಸಲಾಗಿದೆ. ಹೀಗಿದ್ದಾಗಲೂ ಇದನ್ನು ಕಾಂಗ್ರೆಸ್ ವಿರೊಧಿಸುತ್ತಿರುವುದು ನಾಚಿಕೆಗೇಡು ಎಂದು ಟೀಕಿಸಿದರು.

ಇದನ್ನೂ ಓದಿ:ನೋಯ್ಡಾ, ಗ್ರೇಟರ್ ನೋಯ್ಡಾ ದೇಶದಲ್ಲಿಯೇ ಅತೀ ಹೆಚ್ಚು ಮಾಲಿನ್ಯ ನಗರ

2019ರ ಜಾನುವಾರು ಗಣತಿ ಪ್ರಕಾರ 2,38,296 ಗೋವುಗಳನ್ನು ಪ್ರತಿವರ್ಷ ವಧೆ ಮಾಡಲಾಗುತ್ತಿದೆ. ಒಂದು ದಿನದ ವಿಳಂಬವು 662 ಗೋವುಗಳ ವಧೆಗೆ ಕಾರಣವಾಗುತ್ತದೆ. ಇದೇ ವೇಗದಲ್ಲಿ ಗೋವುಗಳ ವಧೆ ನಡೆಯುತ್ತ ಹೋದರೆ ಮುಂದಿನ ದಿನಗಳಲ್ಲಿ ಗೋವುಗಳನ್ನು ಪುಸ್ತಕಗಳಲ್ಲಿ ನೋಡುವ ಸಮಯ ದೂರವಿಲ್ಲ. ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದರು.

Advertisement

ಗೋವುಗಳ ಸಂರಕ್ಷಣೆಗೆ ಉತ್ತರಪ್ರದೇಶ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಭಿನ್ನವಾದ ಪ್ರಯೋಗಗಳು ನಡೆಯುತ್ತಿದ್ದು ಗೋವುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿದೆ. ಉದ್ಯೋಗ ಸೃಷ್ಟಿ, ಗೋವಿನ ದೇಶಿ ಉತ್ಪನ್ನಗಳ ಮಾರಾಟ ಮತ್ತು ಬಳಕೆ ಸಹ ಹೆಚ್ಚುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next