Advertisement
ಈ ಕುರಿತಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಗೋವಿಂದ ಗಾವಡೆ ಸುದ್ಧಿಗಾರರೊಂದಿಗೆ ಮಾತನಾಡಿ, ಪಡಿತರ ಚೀಟಿದಾರರನ್ನು ಹೊರತುಪಡಿಸಿ ವಾರ್ಷಿಕ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಮಾತ್ರ ವರ್ಷಕ್ಕೆ 3 ಉಚಿತ ಸಿಲಿಂಡರ್ ಲಭಿಸಲಿದೆ ಎಂದು ಹೇಳಿದ್ದಾರೆ. 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸರ್ಕಾರಿ ಪ್ರಾಧಿಕಾರದಿಂದ ಆದಾಯ ಪ್ರಮಾಣಪತ್ರವನ್ನು ಪಡೆದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕು. 3 ಸಿಲಿಂಡರ್ ಗಳ ಹಣವನ್ನು ಸಂಬಂಧಿತ ಕುಟುಂಬದ ಖಾತೆಗೆ ಜಮಾವಣೆ ಮಾಡಲಾಗುತ್ತದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
Advertisement
ಗೋವಾ: 3 ಉಚಿತ ಗ್ಯಾಸ್ ಸಿಲಿಂಡರ್ ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ !
04:29 PM May 01, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.