Advertisement

ಗೋವಾ: 3 ಉಚಿತ ಗ್ಯಾಸ್ ಸಿಲಿಂಡರ್ ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ !

04:29 PM May 01, 2022 | Team Udayavani |

ಪಣಜಿ: ಗೋವಾದಲ್ಲಿ ಪ್ರತಿ ಮನೆಗೆ ವರ್ಷಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಘೋಷಿಸಿತ್ತು. ಆದರೆ ಈಗ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಮಾತ್ರ ಈ ಉಚಿತ ಸಿಲಿಂಡರ್ ಲಭ್ಯವಾಗಲಿದೆ ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರ ಠೀಕೆಗೆ ಗುರಿಯಾಗುವಂತಾಗಿದೆ.

Advertisement

ಈ ಕುರಿತಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಗೋವಿಂದ ಗಾವಡೆ ಸುದ್ಧಿಗಾರರೊಂದಿಗೆ ಮಾತನಾಡಿ, ಪಡಿತರ ಚೀಟಿದಾರರನ್ನು ಹೊರತುಪಡಿಸಿ ವಾರ್ಷಿಕ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಮಾತ್ರ ವರ್ಷಕ್ಕೆ 3 ಉಚಿತ ಸಿಲಿಂಡರ್ ಲಭಿಸಲಿದೆ ಎಂದು ಹೇಳಿದ್ದಾರೆ. 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸರ್ಕಾರಿ ಪ್ರಾಧಿಕಾರದಿಂದ ಆದಾಯ ಪ್ರಮಾಣಪತ್ರವನ್ನು ಪಡೆದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕು. 3 ಸಿಲಿಂಡರ್ ಗಳ ಹಣವನ್ನು ಸಂಬಂಧಿತ ಕುಟುಂಬದ ಖಾತೆಗೆ ಜಮಾವಣೆ ಮಾಡಲಾಗುತ್ತದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪೆಟ್ರೋಲ್ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಹೆಚ್ಚಿಸುವುದಿಲ್ಲ, ವರ್ಷವೊಂದಕ್ಕೆ ಪ್ರತಿ ಕುಟುಂಬಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಭರವಸೆ ನೀಡಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next