ಪಣಜಿ: ಗೋವಾದಲ್ಲಿ ಕಾಂಗ್ರೇಸ್ ಪಕ್ಷವು ಜನರ ಬಳಿಗೆ ತಲುಪಲು ಮತ್ತು ಪಕ್ಷದ ಸಿದ್ದಾಂತವನ್ನು ಮುಂದಿಟ್ಟುಕೊಂಡು ಕೆಲಸ ಮಾಡವುದು ಕಾಂಗ್ರೇಸ್ ಸ್ಥಳೀಯ ನಾಯಕರ ಮತ್ತು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಗೋವಾ ಕಾಂಗ್ರೇಸ್ ಪ್ರಮುಖರೊಂದೊಗೆ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಗುಂಡೂರಾವ್, ಗೋವಾ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಸೂಕ್ಷ್ಮವಾಗಿ ಗಮನಿಸಿ ಅಕ್ರಮಗಳ ವಿರುದ್ಧ ಧ್ವನಿಯೆತ್ತಬೇಕಿದೆ. ಜುಲೈ 15 ರ ಒಳಗೆ ಬ್ಲಾಕ್ ಸಮೀತಿಯ ಮರುಸಂಘಟನೆಯನ್ನು ಪೂರ್ಣಗೊಳಿಸಬೇಕು. ಸಾಮಾಜಿಕ ಜಾಲತಾಣಗಳನ್ನು ಬಲಪಡಿಸಬೇಕು. ಜನರ ಸಮಸ್ಯೆಯನ್ನು ಗುರುತಿಸಿ ಜನರ ಧ್ವನಿಯಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
ಇದನ್ನೂ ಓದಿ : ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ
ಈ ಸಭೆಯಲ್ಲಿ ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್, ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಸಮನ್ವಯ ಸಮೀತಿಯ ಅಧ್ಯಕ್ಷ ರಮಾಕಾಂತ ಖಲಪ್, ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಬೀನಾ ನಾಯಕ್, ಮತ್ತಿತರರು ಉಪಸ್ಥಿತರಿದ್ದರು.
ಇನ್ನೆರಡು ದಿನಗಳಲ್ಲಿ( ಜೂನ್ 17 ರಂದು) ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಗೋವಾಕ್ಕೆ ಭೇಟಿ ನೀಡಲಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ರಾಜ್ಯದ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿ ಬ್ಲಾಕ್ ಕಮೀಟಿ ಸದಸ್ಯರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ