Advertisement
ಭಾನುವಾರ ಗೋವಾದ ಪಣಜಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡ ಘಟಕ ಗೋವಾ, ಕನ್ನಡ ಸಂಘಗಳ ಒಕ್ಕೂಟ, ಮನೋಹರ ಗೃಂಥ ಮಾಲೆ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಅಂಬಿಕಾ ತನಯದತ್ತ ಕವಿ-ಕಾವ್ಯ-ಕಲ್ಪನೆ ವಿಚಾರ ಸಂಕಿರಣ ಹಾಗೂ ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಉದ್ಘಾಟನೆ ನೆರವೇರಿ ಮಾತನಾಡಿ, ಕರ್ನಾಟಕದಿಂದ ಹಾಲು,ಹಣ್ಣು, ತರಕಾರಿ, ಹೀಗೆ ಅಗತ್ಯ ವಸ್ತುಗಳು ಮತ್ತು ಗೋವಾಕ್ಕೆ ಕಾರ್ಮಿಕರು, ಕರ್ಮಜೀವಿಗಳು ಕರ್ನಾಟಕದಿಂದಲೇ ಬರುತ್ತಾರೆ. ಗೋವಾ ರಾಜ್ಯ ಕರ್ನಾಟಕವನ್ನು ಅವಲಂಬಿಸಿದೆ. ಗೋವಾ ರಾಜ್ಯವೂ ಕೂಡ ಕನ್ನಡಿಗರನ್ನು ಇಲ್ಲಿ ಸ್ವಾಗತಿಸಿ ಮುಕ್ತ ಅವಕಾಶ ಕಲ್ಪಿಸಿಕೊಟ್ಟಿದೆ. ಕರ್ನಾಟಕ ಮತ್ತು ಗೋವಾ ರಾಜ್ಯದ ನಡುವೆ ಇರುವ ಬಾಂಧವ್ಯವನ್ನು ತೋರಿಸುತ್ತದೆ ಎಂದರು.
Related Articles
Advertisement
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಇಂಡೊ ಪೋರ್ಚುಗೀಸ ಸಾಹಿತ್ಯ ಪ್ರತಿಷ್ಠಾನದ ನಿರ್ದೇಶಕ ಅರವಿಂದ ಯಾಳಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ , ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕದ ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಬದಾಮಿ, ಕರ್ನಾಟಕ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಮಹೇಶಬಾಬು ಸುರ್ವೆ ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್‍ನ ನೂತನ ಪದಾಧಿಕಾರಿಗಳಿಗೆ ಅದಗೃಹಣ ಸಮಾರಮಭ ನಡೆಯಿತು. ಕರ್ನಾಟಕದಿಂದ ಆಗಮಿಸಿದ ಸಾಹಿತಿಗಳು ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಪ್ರತಿನಿಧಿ ರೇಣುಕಾ ದಿನ್ನಿ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು. ಮಹಿಳಾ ಪ್ರತಿನಿಧಿ ಕಾಂಚನಾ ಜೋಶಿ ಸಂಗಡಿಗರಿಂದ ನಾಡಗೀತೆ ಪ್ರಸ್ತುತಪಡಿಸಲಾಯಿತು. ಶೀಲಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲಾ ಕ.ಸಾ.ಪ ಪದಾಧಿಕಾರಿಗಳು ಹಾಗೂ ತಾಲೂಕಾ ಘಟಕದ ಪದಾಧಿಕಾರಿಗಳು, ವಿವಿಧ ಕನ್ನಡ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಕರ್ನಾಟಕದ ಧಾರವಾಡದಿಂದ ಆಗಮಿಸಿರುವ ಸಾಹಿತಿಗಳಿಂದ ಕವಿಗೋಷ್ಠಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕದ ಗೌರವ ಕೋಶಾಧ್ಯಕ್ಷ ಪುಟ್ಟಸ್ವಾಮಿ ಗುಡಿಗಾರ ಕೊನೆಯಲ್ಲಿ ವಂದನಾರ್ಪಣೆಗೈದರು.