Advertisement

ಗೋವಾ ವಿಧಾನಸಭಾ ಚುನಾವಣೆ: ಎಲ್ಲ ಕ್ಷೇತ್ರಗಳಲ್ಲಿ ಸ್ಫರ್ಧಿಸಲು ಕಾಂಗ್ರೆಸ್ ಸಿದ್ಧತೆ

04:13 PM Oct 11, 2021 | Team Udayavani |

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸಮವಿಚಾರಿ ಪಕ್ಷದೊಂದಿಗೆ ಕಾಂಗ್ರೇಸ್ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ಪಕ್ಷವು ಇದುವರೆಗೂ ನಿರ್ಣಯ ತೆಗೆದುಕೊಂಡಿಲ್ಲ. ನಾವು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಫರ್ಧಿಸಲು ಸಿದ್ಧತೆ ನಡೆಸಿದ್ದೇವೆ ಎಂದು ಗೋವಾ ಕಾಂಗ್ರೆಸ್ ಮುಖ್ಯ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ಹೇಳಿದ್ದಾರೆ.

Advertisement

ಗೋವಾದ ಬಾಣಾವಲಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು- ಅಗತ್ಯ ಬಿದ್ದರೆ ಕಾಂಗ್ರೇಸ್ ಪಕ್ಷವು ರಾಜ್ಯದ ಎಲ್ಲ ಮತಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾವುದೇ ಶಾಸಕರು ಪಕ್ಷಾಂತರ ಮಾಡಬಾರದು ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಸೇರಿದಂತೆ ಎಲ್ಲ ವಿಷಯಗಳಲ್ಲಿ ಜನತೆಯ ಅಭಿಪ್ರಾಯ ಸಂಗ್ರಹಿಸಲಿದ್ದೇವೆ ಎಂದು ಪಿ.ಚಿದಂಬರಂ ನುಡಿದರು.

ಈ ಸಂದರ್ಭದಲ್ಲಿ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್, ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಕಾಂಗ್ರೇಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್, ದಕ್ಷಿಣ ಗೋವಾ ಸಂಸದ ಫ್ರಾನ್ಸಿಸ್ ಸರ್ದಿನ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next